ಸುಂಟಿಕೊಪ್ಪ, ಜ. ೨೮: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಯಾಗಿ ಎಂ.ಸಿ. ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನೆಲ್ಲಿಯಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಸಿ. ಶ್ರೀಧರ್ ಅವರಿಗೆ ಸುಂಟಿಕೊಪ್ಪ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.