ಮಡಿಕೇರಿ, ಜ. ೨೭ : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ, ಗೋದಾಮು ಹಾಗೂ ಸಭಾ ಭವನದ ಉದ್ಘಾಟನಾ ಸಮಾರಂಭವು ತಾ. ೨೯ ರಂದು ಚೇರಂಬಾಣೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ. ಸುಮನ್ ಹಾಗೂ ಆಡಳಿತ ಮಂಡಳಿಯ ಪ್ರಮುಖರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಉದ್ಘಾಟಿಸಲಿದ್ದು, ನೂತನ ಕಟ್ಟಡ ಕಚೇರಿಯನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ನೂತನ ಸಭಾಭವನ ಮತ್ತು ನೂತನ ಕಟ್ಟಡದ ಸೇಫ್ ಲಾಕರನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ. ಬಾಂಡ್ ಗಣಪತಿ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ. ಸುಮನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿರುವರು.