ಮಡಿಕೇರಿ, ಜ. ೨೮: ಫೆಬ್ರವರಿ ೨ ರಂದು ಜಿಲ್ಲಾ ಜೆಡಿಎಸ್ ಯುವ ಘಟಕದ ಪದಾಧಿಕಾರಿಗಳ ಸಭೆ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆ ಹಾಗೂ ಹೋರಾಟದ ಕುರಿತು ಚರ್ಚಿಸಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಾಂಘಿಕ ಕೆಲಸ ಮಾಡುವ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ.

ಇದರೊಂದಿಗೆ ಬಿಜೆಪಿ ಸರಕಾರ ಜನವಿರೋಧಿ ನೀತಿಯಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮೂಲಭೂತ ಅವಶ್ಯಕತೆಗಳಿಲ್ಲ. ಸುಸಜ್ಜಿತ ಆಸ್ಪತ್ರೆ ಇಲ್ಲ. ಇದಕ್ಕೆ ಹೋರಾಟದ ಅಗತ್ಯತೆ ಇದೆ. ಮುಂದಿನ ದಿನಗಳಲ್ಲಿ ಉಸ್ತುವಾರಿ ಸಚಿವರಿಗೆ ಮುತ್ತಿಗೆ ಹಾಕುವ ಮೂಲಕ ತೀವ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದರು.

ಯುವ ಘಟಕದ ವಕ್ತಾರ ರವಿಕಿರಣ್ ಮಾತನಾಡಿ, ರಾಷ್ಟಿçÃಯ ಪಕ್ಷಗಳು ಒಡೆದು ಆಳುವ ನೀತಿ ಅನುಸರಿಸುತ್ತಿವೆ. ಯುವ ಸಮೂಹ ಈ ಬಗ್ಗೆ ಚಿಂತಿಸುವ ಅವಶ್ಯಕತೆ ಇದೆ ಎಂದರು.

ಗೋಷ್ಠಿಯಲ್ಲಿ ಯುವ ಘಟಕದ ವಕ್ತಾರ ಜಿನಾಶುದ್ದೀನ್, ಮಡಿಕೇರಿ ನಗರಾಧ್ಯಕ್ಷ ಮೋನಿಶ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಸೈಫುದ್ದೀನ್, ಮಡಿಕೇರಿ ತಾಲೂಕು ಅಧ್ಯಕ್ಷ ಉಮೇಶ್ ಹಾಜರಿದ್ದರು.