ಮಡಿಕೇರಿ, ಜ. ೨೮: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಡಿಕ್ಕಿ ಹೊಡೆದ ಘಟನೆ ಕಗ್ಗೋಡ್ಲು - ಹಾಕತ್ತೂರು ನಡುವಿನ ಹೆದ್ದಾರಿಯ ತಿರುವಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ. ಮಡಿಕೇರಿಯಿಂದ ವೀರಾಜಪೇಟೆ ಕಡೆಗೆ ತೆರಳುತ್ತಿದ್ದ ಹುಂಡೈ ವೆನ್ಯೂ ಕಾರು ಮೋರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.