ಮಡಿಕೇರಿ, ಜ. ೨೮: ಅಕ್ರಮವಾಗಿ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮರಗೋಡುವಿನಲ್ಲಿ ನಡೆದಿದೆ.

ಕತ್ತಲೆಕಾಡು ನಿವಾಸಿ ಜಾನ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.