ಕೊಡ್ಲಿಪೇಟೆ, ಜ. ೨೮: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳಾ ಗ್ರಾಮ ಸಭೆ ಆಯೋಜಿಸಲಾಗಿತ್ತು,
ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ಲೀನಾ ಪರಮೇಶ್ ಪಂಚಾಯಿತಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಿಳಿಸಲು ಹಾಗೂ ಮಹಿಳೆಯರು ಮುಕ್ತವಾಗಿ ಮಾತನಾಡಲು ಮಹಿಳೆಯರಿಗೆ ಪ್ರತ್ಯೇಕ ಗ್ರಾಮ ಸಭೆಯನ್ನು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಏರ್ಪಡಿಸಲಾಗಿದೆ ಮಹಿಳೆಯರು ತಮ್ಮ ಕುಂದುಕೊರತೆಗಳನ್ನು ಮಂಡಿಸಲು ಒಂದು ಅವಕಾಶವಾಗಿದೆ ಎಂದರು,
ಗ್ರಾ.ಪA. ಕಾರ್ಯದರ್ಶಿ ಆಶ್ವಥ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು, ಉಪಾಧ್ಯಕ್ಷೆ ರೇಣುಕಾ ಮೇದಪ್ಪ, ಸದಸ್ಯರಾದ ಹನೀಫ್, ಮೋಕ್ಷಿಕ್ ರಾಜ್, ಪಾವನ, ದ್ರಾಕ್ಷಾಯಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದರು, ಪಂಚಾಯಿತಿ ಸಿಬ್ಬಂದಿ ರಂಜಿತಾ, ಸಂಜೀವಿನಿ ಓಕ್ಕೂಟದ ಅಧ್ಯಕ್ಷೆ ಸರೋಜಮ್ಮ ಉಪಸ್ಥಿತರಿದ್ದರು. ಗ್ರಾಮಸ್ಥರಾದ ಶ್ವೇತಾ, ಮೈಮುನಾ, ರಹಮತ್ ಮುಂತಾದವರು ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಹೇಳಿದರು.