ಕೊಡ್ಲಿಪೇಟೆ, ಜ. ೨೯: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ವಿದ್ಯಾದೇಗುಲಗಳೇ ಅಡಿಗಲ್ಲಾಗಿವೆ. ಶಿಕ್ಷಕರಿಗೆ ಸಿಗುವ ಗೌರವ ಸಮಾಜದಲ್ಲಿ ಇನ್ಯಾರಿಗೂ ಸಿಗುವುದಿಲ್ಲ. ಅಂತಹ ಶ್ರೇಷ್ಠ ಸ್ಥಾನಮಾನ ಶಿಕ್ಷಕರಿಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಸಮೀಪದ ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯ ಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಿಗೆ ಸಿಗುವ ವಿಶೇಷ ಗೌರವ ಇನ್ನಿತರ ದೊಡ್ಡ ಹುದ್ದೆಯಲ್ಲಿರು ವವರಿಗೂ ಸಿಗುವುದಿಲ್ಲ. ಗುರುಗಳನ್ನು ಗೌರವಿಸುವುದು ಉತ್ತಮ ಕಾರ್ಯವಾಗಿದೆ. ವಿದ್ಯಾದೇಗುಲಕ್ಕೆ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿ ಗಳು ಮನಸ್ಸನ್ನು ಶುಭ್ರವಾಗಿರಿಸಿ ಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ, ಹಳೆಯ ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ಮರೆಯಬಾರದು. ಈ ನಿಟ್ಟಿನಲ್ಲಿ ಹಳೆಯ ವಿದ್ಯಾರ್ಥಿಗಳೇ ಮುಂದೆ ಬಂದು ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.
ಒಕ್ಕಲಿಗ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ಗುರುಗಳೇ ದೇವರು-ಪಾಠ ಶಾಲೆಯೇ ಮಂದಿರ. ಕಲಿತ ವಿದ್ಯೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸುವರ್ಣ ಮಹೋತ್ಸವ ಅಂಗವಾಗಿ ಈ ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುವಂದನೆ ಮೂಲಕ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶಾಲೆಯ ಹಳೆಯ ವಿದ್ಯಾರ್ಥಿ ಸಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಮಾತನಾಡಿ, ವಿದ್ಯೆಯಿಂದ ಗೌರವ ಹಾಗೂ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ. ಇದರಲ್ಲಿ ಶಿಕ್ಷಕರುಗಳ ಪಾತ್ರ ದೊಡ್ಡದು. ಈ ನಿಟ್ಟಿನಲ್ಲಿ ಗುರುಗಳನ್ನು ಸ್ಮರಿಸುತ್ತಿರುವುದು ಉತ್ತಮ ಕಾರ್ಯ ಎಂದರು.
ಹಳೆಯ ವಿದ್ಯಾರ್ಥಿ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಕೆ.ಹೆಚ್. ಅಬ್ದುಲ್ ಮಜೀದ್ ಮಾತನಾಡಿ, ಸರ್ಕಾರಿ ಶಾಲೆಗಳು ಮುಚ್ಚಲ್ಪಡುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.
ಶನಿವಾರಸAತೆ ವಿಘ್ನೇಶ್ವರ ಪ್ರೌಢ ಶಾಲೆಯ ಶಿಕ್ಷಕ ಜಹೀರ್ ನಿಜಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಪಿ. ಪುಟ್ಟರಾಜು, ನಿವೃತ್ತ ತಹಶೀಲ್ದಾರ್ ಜಯರಾಂ, ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ಲೀನಾ ಪರಮೇಶ್, ಉಪಾಧ್ಯಕ್ಷೆ ರೇಣುಕಾ ಮೇದಪ್ಪ, ಸದಸ್ಯರಾದ ದಿನೇಶ್ ಕುಮಾರ್,ಪಾವನ ಗಗನ್, ತೂಕ ಮತ್ತು ಅಳತೆ ಇಲಾಖೆಯ ಸಹಾಯಕ ನಿಯಂತ್ರಕ ಲಿಂಗರಾಜು, ಮಲ್ಲಿಪಟ್ಟಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎಲ್.ಕೆ. ಚಂದ್ರಕಲಾ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ.ಆರ್. ವೇದ್ಕುಮಾರ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಭಾಗ್ಯ, ಸ್ವಾಗತ ಸಮಿತಿ ಉಸ್ತುವಾರಿ ಹನೀಫ್ ಕಾರ್ಯಕ್ರಮ ನಿರ್ವಹಿಸಿದರು.
ಸುವರ್ಣ ಮಹೋತ್ಸವ ಅಂಗವಾಗಿ ನಡೆದ ಮೆರವಣಿಗೆಗೆ ಪೊಲೀಸ್ ಇನ್ಸ್ಪೆಕ್ಟರ್ ಪರಶಿವಮೂರ್ತಿ ಚಾಲನೆ ನೀಡಿದರು. ಗ್ರಾಮೀಣ ಕ್ರೀಡಾಕೂಟವನ್ನು ಉಚ್ಚ ನ್ಯಾಯಾಲಯದ ವಕೀಲರಾದ ಹೆಚ್.ಎಸ್. ಚಂದ್ರಮೌಳಿ ಉದ್ಘಾಟಿಸಿ ದರು. ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಹಾಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.