ಮಡಿಕೇರಿ, ಜ. ೨೯: ವೀರಾಜಪೇಟೆಯಿಂದ ಕೇರಳಕ್ಕೆ ಸಾಗುವ ರಸ್ತೆ ನಡುವಿನ ಉರ್ಟಿ ಅರಣ್ಯ ಪ್ರದೇಶದಲ್ಲಿ ತುಂಬಿದ್ದ ತ್ಯಾಜ್ಯವನ್ನು ಅರಣ್ಯ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.
ಈ ಕುರಿತು ‘ಶಕ್ತಿ’ಯಲ್ಲಿ ತಾ. ೨೯ ರಂದು ವರದಿ ಪ್ರಕಟವಾಗಿತ್ತು. ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಮಾಕುಟ್ಟ ಕೆರಟ್ಟಿ ಮೀಸಲು, ಬ್ರಹ್ಮಗಿರಿ ವನ್ಯಜೀವಿ ವಲಯ ವ್ಯಾಪ್ತಿಯ ಉರ್ಟಿ ಅರಣ್ಯ ಪ್ರದೇಶದಲ್ಲಿ ಇದ್ದ ತ್ಯಾಜ್ಯಗಳನ್ನು ತೆರವುಗೊಳಿಸಿ ಶುಚಿಗೊಳಿಸಿದೆ.