ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ಅಪ್ಪಣ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ವಹಿಸಿದ್ದರು. ದೇಶದ ಜನತೆ ಸಂವಿಧಾನಕ್ಕೆ ಬದ್ಧರಾಗಿ ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಪ್ರಾಂಶುಪಾಲೆ ಕಲ್ಯಾಟಂಡ ಶಾರದ ಅಪ್ಪಣ್ಣ ಕಿವಿಮಾತು ಹೇಳಿದರು.

ಶಿಕ್ಷಕ ಮೂಡೆರ ಕಾಳಯ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಎನ್.ಜೆ. ಬೋಪಣ್ಣ ಪ್ರಾರ್ಥಿಸಿದರು. ಕೆ.ಎ. ಸೋಮಣ್ಣ ಸ್ವಾಗತಿಸಿದರು. ಸಮಯ ಉತ್ತಪ್ಪ ಮತ್ತು ಸಂಕೇತ ಚಂಗಪ್ಪ ಕಾರ್ಯಕ್ರಮ ನಿರೂಪಿಸಿದರೆ, ಶರಣ್ ಮುತ್ತಣ್ಣ ವಂದಿಸಿದರು.ಮಡಿಕೇರಿ: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಧ್ವಜಾರೋಹಣ ಮಾಡಿದರು. ಎನ್.ಸಿ.ಸಿ. ವತಿಯಿಂದ ಪಥಸಂಚಲನ ಕಾರ್ಯಕ್ರಮ ನಡೆಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ದಿನದ ಮಹತ್ವವನ್ನು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಸುಜಾತ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಮಾತನಾಡಿ, ರಾಷ್ಟçಪ್ರೇಮವನ್ನು ಮಕ್ಕಳು ಚಿಕ್ಕಂದಿನಿAದಲೇ ಬೆಳೆಸಿಕೊಳ್ಳಬೇಕು. ಸ್ವಾತಂತ್ರ‍್ಯ ಹೋರಾಟಗಾರರ ಬಗ್ಗೆ ಹೆಚ್ಚಿನ ಪುಸ್ತಕಗಳನ್ನು ಓದಿ ಅವರ ತ್ಯಾಗ ಬಲಿದಾನದ ಬಗ್ಗೆ ತಿಳಿಯಬೇಕು. ನಾವೆಲ್ಲರು ಒಂದೇ ಎಂದು ಭಾರತಮಾತೆಯ ರಕ್ಷಣೆಗೆ ಮಹತ್ವವನ್ನು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಸುಜಾತ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಮಾತನಾಡಿ, ರಾಷ್ಟçಪ್ರೇಮವನ್ನು ಮಕ್ಕಳು ಚಿಕ್ಕಂದಿನಿAದಲೇ ಬೆಳೆಸಿಕೊಳ್ಳಬೇಕು. ಸ್ವಾತಂತ್ರ‍್ಯ ಹೋರಾಟಗಾರರ ಬಗ್ಗೆ ಹೆಚ್ಚಿನ ಪುಸ್ತಕಗಳನ್ನು ಓದಿ ಅವರ ತ್ಯಾಗ ಬಲಿದಾನದ ಬಗ್ಗೆ ತಿಳಿಯಬೇಕು. ನಾವೆಲ್ಲರು ಒಂದೇ ಎಂದು ಭಾರತಮಾತೆಯ ರಕ್ಷಣೆಗೆ ನಿಲ್ಲಬೇಕು. ಧರ್ಮದ ನಡುವಿನ ದ್ವೇಷವನ್ನು ಹೋಗಲಾಡಿಸಬೇಕು. ಉತ್ತಮ ವಿದ್ಯಾರ್ಥಿಗಳಾಗಿ ರಾಷ್ಟçದ ನಿರ್ಮಾಣ ಮಾಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ನೃತ್ಯ ಹಾಗೂ ದೇಶಭಕ್ತಿಯನ್ನು ಸಾರುವ ಗಾಯನ ನಡೆಯಿತು. ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.ಸೋಮವಾರಪೇಟೆ: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಈರಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಎಂ.ಕೆ. ಸುಕುಮಾರ್ ಸೇರಿದಂತೆ ಸಂಘದ ಸದಸ್ಯರು ಇದ್ದರು.ಪೊನ್ನಂಪೇಟೆ: ವೀರಾಜಪೇಟೆ ಸಮೀಪದ ನಲ್ವತ್ತೋಕ್ಲಿನ ಮೊಹಿದ್ದೀನ್ ಜುಮಾ ಮಸೀದಿ ಮತ್ತು ಬುಸ್ತಾನುಲ್ ಉಲೂಂ ಹೈಯರ್ ಸೆಕೆಂಡರಿ ಮದರಸ ವತಿಯಿಂದ ೭೪ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಸೀದಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಧ್ವಜಾರೋಹಣ ನಡೆಸಿ ರಾಷ್ಟçಗೀತೆಯೊಂದಿಗೆ ಧ್ವಜವಂದನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮದರಸ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರು, ದೇಶದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ ಇತರ ಮೂಲಭೂತ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಡಾ. ಅಂಬೇಡ್ಕರ್ ಸೇರಿದಂತೆ ದೇಶದ ಭವಿಷ್ಯದ ಕುರಿತು ದೂರದೃಷ್ಟಿತ್ವ ಹೊಂದಿದ್ದ ಎಲ್ಲಾ ಮಹನೀಯರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾದ ಈ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಜಿಲ್ಲಾ ಖಜಾನಾಧಿಕಾರಿ ಕನ್ನಡಿಯಂಡ ಎ. ಆಲಿ ಅವರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಮದರಸ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಒಂದೇ ನಾವೆಲ್ಲರೂ ಒಂದೇ, ನಮಗೊಂದೇ ಈ ಭಾರತ' ಎಂಬ ಸಮೂಹ ಗಾನ ವಿಶೇಷವಾಗಿ ಆಕರ್ಷಿಸಿತು. ಮಸೀದಿಯ ಧರ್ಮ ಗುರುಗಳಾದ ಸಿದ್ದೀಕ್ ಫಾಝಿಳಿ, ಝಿಯಾದ್ ದಾರಿಮಿ, ಸದರ್ ಮುಸ್ಲಿಯಾರ್ ಡಿ.ಎ. ಸಿರಾಜ್ ಜುಹರಿ, ಶಿಯಾಬ್ ಸಹದಿ, ಆಡಳಿತ ಮಂಡಳಿ ಉಪಾಧ್ಯಕ್ಷ ಡಿ.ಎ. ಅಶ್ರಫ್, ಕಾರ್ಯದರ್ಶಿ ಡಿ.ಎಂ. ಯೂಸುಫ್, ಜಂಟಿ ಕಾರ್ಯದರ್ಶಿ ಪಿ.ಎ. ಹಮೀದ್, ನಿವೃತ್ತ ಯೋಧ ಪಟ್ಟಿಯಡ ಸಾದಲಿ, ಆಡಳಿತ ಮಂಡಳಿ ಮಾಜಿ ಉಪಾಧ್ಯಕ್ಷ ಕೆ.ಎ. ಜುಬೈರ್, ಪ್ರಮುಖರಾದ ಮಜೀದ್, ಸಿರಾಜ್ ಸೇರಿದಂತೆ ಗ್ರಾಮಸ್ಥರು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಿನದ ಅಂಗವಾಗಿ ಕೊನೆಗೆ ಎಲ್ಲರಿಗೂ ಸಿಹಿ ಹಂಚಲಾಯಿತು.ಚೆಯ್ಯAಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ಯಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಕೋಡಿರ ವಿನೋದ್ ನಾಣಯ್ಯ, ಮುಂಡ್ಯೋಳAಡ ಈರಪ್ಪ, ಮಮ್ಮದ್, ಪೆಮ್ಮಂಡ ಕಾವೇರಮ್ಮ, ಮಂಜುಳಾ, ನೇತ್ರಾವತಿ, ಕಾರ್ಯದರ್ಶಿ ಬಿದ್ದಪ್ಪ, ಗ್ರಂಥಪಾಲಕಿ ರೆನ್ನಿ ಬಿಬೋ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.ನಾಪೋಕ್ಲು: ವಿದ್ಯಾಹೀನ ಪಶುಸಮಾನ ಎಂದು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ.ಜಿ. ಬೋಪಯ್ಯ ಹೇಳಿದರು. ಅವರು ಇಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆಯ ಗಣರಾಜ್ಯೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಜನೆ ಮಾಡುವುದರ ಮೂಲಕ ಬುದ್ಧಿ ವಿಕಸನಗೊಂಡು ಪ್ರತಿಯೊಬ್ಬರು ಉನ್ನತಿಯನ್ನು ಹೊಂದಲು ಸಾಧ್ಯ, ಈ ನಿಟ್ಟಿನಲ್ಲಿ ಸಮಾಜದ ಉನ್ನತಿಗೆ ಪ್ರತಿಯೊಬ್ಬರು ಶ್ರಮಿಸುವಂತಾಗಬೇಕೆAದು ಆಶಿಸಿದರು. ವೇದಿಕೆಯಲ್ಲಿ ಪ್ರಬಾರ ಪ್ರಾಂಶುಪಾಲೆ ಡಾ. ಅವನಿಜ ಸೋಮಯ್ಯ, ಉಪ ಪ್ರಾಂಶುಪಾಲ ಶಿವಣ್ಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲೆಯ ಕಟ್ಟಡ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿ.ಪಿ. ಜಿನ್ನು ನಾಣಯ್ಯ, ಶಾಲಾ ಶೈಕ್ಷಣಿಕ ಗುಣಮಟ್ಟ ಖಾತರಿ ಉಪ ಸಮಿತಿ ಅಧ್ಯಕ್ಷ ಉದಯ ಶಂಕರ್, ಶಾಲಾ ಆಡಳಿತ ಮಂಡಳಿ ಸದಸ್ಯರು, ಜಿ.ಎಂ.ಪಿ. ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲಾ ಶಿಕ್ಷಕ ವೃಂದ, ಪೋಷಕರು ಹಾಜರಿದ್ದರು. ಪ್ರಬಾರ ಉಪಪ್ರಾಂಶುಪಾಲ ಶಿವಣ್ಣ ಸ್ವಾಗತಿಸಿದರು. ಶಿಕ್ಷಕ ಮಾದೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಉಷಾ ರಾಣಿ ಶಾಲಾ ವರದಿ ವಾಚಿಸಿ ಪ್ರಾಂಶುಪಾಲರಾದ ಅವನಿಜ ಸೋಮಯ್ಯ ವಂದಿಸಿದರು.ಪೊನ್ನAಪೇಟೆ: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಭಾಂಗಣ ದಲ್ಲಿ ಗಣರಾಜ್ಯೋತ್ಸವ ಆಚರಿಸ ಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ, ಪಿಡಿಓ ಪುಟ್ಟರಾಜು, ಗ್ರಾ.ಪಂ. ಸದಸ್ಯರಾದ ರಮೇಶ್, ಆರತಿ ಸುರೇಶ್, ವಿಜಯ ಕುಮಾರ್, ಜುನೈದ್, ಅಜೀಜ್ ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.ಕುಶಾಲನಗರ: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ. ಕೃಷ್ಣ ಧ್ವಜಾರೋಹÀಣ ನೆರವೇರಿಸಿದರು.

ಪೋಷಕರಿಗೆ, ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ನಂತರ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ ಮೂಡಿಬಂದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ಭಾಗ್ಯ, ಶಿಕ್ಷಕ, ಶಿಕ್ಷಕಿಯರು ಇದ್ದರು.ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ ಮೂಡಿಬಂದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ಭಾಗ್ಯ, ಶಿಕ್ಷಕ, ಶಿಕ್ಷಕಿಯರು ಇದ್ದರು.ಚೆಂಬು ಸರಕಾರಿ ಪ್ರೌಢಶಾಲೆ

ಮಡಿಕೇರಿ: ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಪ್ರಬಾರ ಮುಖ್ಯ ಶಿಕ್ಷಕಿ ದೇಜಮ್ಮ ನೆರವೇರಿಸಿದರು. ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಯಮುನ ಸ್ವಾಗತಿಸಿದರು. ಧ್ವಜಾರೋಹಣ ನೆರವೇರಿಸಿದ ದೇಜಮ್ಮ ಮಾತನಾಡಿ, ಗಣರಾಜ್ಯೋತ್ಸವ ದಿನದ ಮಹತ್ವವನ್ನು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಪಾಲಿಸುತ್ತಾ ಬಂದಲ್ಲಿ ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಗಣಿತ ಶಿಕ್ಷಕ ಕೆ.ಯು. ರಂಜಿತ್ ವಂದಿಸಿದರು.

ನAತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ರಮೇಶ್ ಕುಮಾರ್ ವಹಿಸಿಕೊಂಡರು. ಸಭೆಯಲ್ಲಿ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳು, ಶಿಕ್ಷಕರು, ಅತಿಥಿಗಳು ಭಾಷಣ ಮಾಡಿದರು.

ಇತ್ತೀಚೆಗೆ ಮೂಡಬಿದ್ರೆಯಲ್ಲಿ ನಡೆದ ಅಂರ‍್ರಾಷ್ಟಿçÃಯ ಸಾಂಸ್ಕೃತಿಕ ಜಂಬೂರಿಯಲ್ಲಿ ಭಾಗವಹಿಸಿದ್ದ ೧೭ ವಿದ್ಯಾರ್ಥಿಗಳು ಗಳಿಸಿದ ಪದಕಗಳು, ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಿಕ್ಷಕ ಕೆ.ಯು. ರಂಜಿತ್ ಅವರಿಗೆ ಕೊಡಗು ತಂಡದ ೫೩೬ ಮಂದಿಯ ನಾಯಕತ್ವ ವಹಿಸಿದಕ್ಕಾಗಿ ನೀಡಿದ ಪದಕವನ್ನು ಈ ಸಂದರ್ಭ ನೀಡಲಾಯಿತು.

ಸಭೆಯಲ್ಲಿ ನಿವೃತ್ತರಾದ ಪ್ರಬಾರ ಮುಖ್ಯ ಶಿಕ್ಷಕಿ ದೇಜಮ್ಮ ಅವರನ್ನು ಎಸ್.ಡಿ.ಎಂ.ಸಿ. ಮತ್ತು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಶಿಕ್ಷಣ ತಜ್ಞ ಹೊಸೂರು ಗೋಪಾಲಕೃಷ್ಣ, ಸಂಸ್ಥೆ ಮುಖ್ಯಸ್ಥ ಹೊಸೂರು ಚಂದ್ರಶೇಖರ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಪುಷ್ಪಕಲಾ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಬಾರ ಮುಖ್ಯ ಶಿಕ್ಷಕಿ ಯಮುನ ಸ್ವಾಗತಿಸಿ, ಅತಿಥಿ ಶಿಕ್ಷಕಿ ಕವಿತ ವಂದಿಸಿದರು. ಸ್ಕೌಟ್ ಶಿಕ್ಷಕ ಕೆ.ಯು. ರಂಜಿತ್ ಕಾರ್ಯಕ್ರಮ ನಿರೂಪಿಸಿದರು.ಸುಂಟಿಕೊಪ್ಪ: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೪ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಇತರ ದೇಶಗಳ ಸಂವಿಧಾನಕ್ಕಿAತಲೂ ನಮ್ಮ ದೇಶದ ಸಂವಿಧಾನ ಅತ್ಯಂತ ಶೇಷ್ಠವಾದುದು. ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ತಿಳಿದುಕೊಳ್ಳುವ ಮೂಲಕ ದೈನಂದಿನ ಜೀವನದಲ್ಲಿ ಸಂವಿಧಾನವನ್ನು ಅಳವಡಿಸಿಕೊಳ್ಳಬೇಕೆಂದರು. ಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಶಶಿಕಾಂತ್ ಬಹುಮಾನ ವಿತರಿಸಿ ಮಾತನಾಡಿದರು. ಈ ಸಂದರ್ಭ ಕಾರ್ಯದರ್ಶಿ ಶಶಾಂಕ್, ಗ್ಲೇನ್ ಮೆನೆಜೆಸ್, ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಹಾಜರಿದ್ದರು. ಮುಖ್ಯೋಪಾಧ್ಯಾಯಿನಿ ವೀರಾ ಡಿಸೋಜ, ಶಿಕ್ಷಕರಾದ ಈವಾ ಬೆನ್ಸಿಸ್, ಪ್ರೀತಿ ಪಿಂಟೋ, ಆರ್.ಡಿ. ತೋಮಸ್, ಮೇರಿ ತೋಮಸ್, ಅಶ್ವಿತ ಮತ್ತಿತರರು ಇದ್ದರು.ಕಡಂಗ: ಸರಕಾರಿ ಶಾಲೆ ಕಡಂಗದಲ್ಲಿ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಪಿ.ಎಂ. ಶಾಂತಿಕುಮಾರಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ವೇದಿಕೆ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಎಸ್.ಡಿ.ಎಂಸಿ. ಅಧ್ಯಕ್ಷೆ ಫಾತಿಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಕೋಡಿರ ವಿನೋದ್ ಹಾಜರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದವರನ್ನು ಪಿ.ಎಂ. ಶಾಂತಿಕುಮಾರಿ ಸ್ವಾಗತಿಸಿದರು. ದಿನದ ಮಹತ್ವದ ಕುರಿತು ವತ್ಸಲಾ ಮಾತನಾಡಿದರು.

ಹಳೆಯ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ಕೊಡುವ ಕಾರ್ಯಕ್ರಮವನ್ನು ಬಬಿತಾ ಅವರು ನಡೆಸಿದರು. ಕೆ.ಎಂ. ವಿಮಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು, ಕರಡ ಗ್ರಂಥಪಾಲಕರು, ಆಯುಷ್ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಹಾಗೂ ಮಕ್ಕಳು ಹಾಜರಿದ್ದರು.

ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ವತಿಯಿಂದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಯಿತು.ಸೋಮವಾರಪೇಟೆ: ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪತ್ರಕರ್ತರ ಸಂಘದ ವತಿಯಿಂದ ೭೪ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ ನೆರವೇರಿಸಿದರು. ಈ ಸಂದರ್ಭ ಪರಿಷತ್ ಪದಾಧಿಕಾರಿಗಳಾದ ಹೆಚ್.ಜೆ. ಜವರ, ಎ.ಪಿ. ವೀರರಾಜು, ಜ್ಯೋತಿ, ಹೆಚ್.ಎ. ನಾಗರಾಜು, ತಿಮ್ಮಶೆಟ್ಟಿ, ಎಂ.ಎ. ರುಬೀನ, ಇಂದ್ರೇಶ್ ಹಾಗೂ ವಸಂತಕುಮಾರಿ ಇದ್ದರು.ಕುಶಾಲನಗರ: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಆರೋಗ್ಯಾಧಿಕಾರಿ ಉದಯಕುಮಾರ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರು ಹಾಗೂ ಸದಸ್ಯರು ಇದ್ದರು. (ಮುಂದುವರಿಯುವುದು)