ಸೋಮವಾರಪೇಟೆ, ಜ. ೨೯: ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಆಶ್ರಯದಲ್ಲಿ ಗೌಡಳ್ಳಿಯಲ್ಲಿ ಆಯೋಜಿಸಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಕ್ಷೇತ್ರದ ಶಾಸಕ, ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಬಿಡುಗಡೆ ಮಾಡಿದರು.
ಶಾಸಕರ ಕಚೇರಿಯಲ್ಲಿ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ರಂಜನ್, ೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ ೧೧ ರಂದು ಗೌಡಳ್ಳಿ ಬಿಜಿಎಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬAಧ ಉಪಸಮಿತಿಗಳ ಪದಾಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದರು. ಎಲ್ಲಾ ಸಾಹಿತ್ಯ ಆಸಕ್ತರು, ಸಂಘ ಸಂಸ್ಥೆಗಳ ಪ್ರಮುಖರು ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ನಿಕಟಪೂರ್ವ ಅಧ್ಯಕ್ಷ ಹೆಚ್. ಜೆ. ಜವರಪ್ಪ, ಕಾರ್ಯದರ್ಶಿ, ಎ.ಪಿ. ವೀರರಾಜ್, ಸದಸ್ಯರಾದ ಎಂ.ಬಿ. ಅಭಿಮನ್ಯು ಕುಮಾರ್, ಜಲಾ ಕಾಳಪ್ಪ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.