ಮಡಿಕೇರಿ, ಜ. ೨೯: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pಒ-ಏISಂಓ) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ. ೬ ಸಾವಿರಗಳನ್ನು ಒಟ್ಟು ೩ ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು ೪೯,೫೮೨ ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿರುತ್ತದೆ. ಈ ಸಂಬAಧ ಸದರಿ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿ ರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. e-ಏಙಅ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ರೈತರು hಣಣಠಿ://ಠಿmಞisಚಿಟಿ.gov.iಟಿ ಪೋರ್ಟಲ್‌ನ ಈಚಿಡಿmeಡಿs ಅoಡಿಟಿeಡಿನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊAದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‌ಗೆ ಒಟಿಪಿಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “SUಃಒIಖಿ ಈಔಖ ಂUಖಿಊ” ಎಂಬ ಬಟನ್ ಒತ್ತಬೇಕು. ಆಗ ತಂತ್ರಾAಶ ಆಧಾರಿತ ಪರಿಶೀಲನೆ ನಡೆದು e-ಏಙಅ is “suಛಿಛಿessಜಿuಟಟಥಿ submiಣಣeಜ” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-ಏಙಅ ಚಿಟಡಿeಚಿಜಥಿ ಜoಟಿe” ಎಂಬ ಮಾಹಿತಿ ಗೋಚರಿಸುತ್ತದೆ.)

ಮೇಲೆ ತಿಳಿಸಿದಂತೆ, ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊAದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‌ಸಿ (ನಾಗರೀಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯ ವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರೀಕ ಸೇವಾ ಕೇಂದ್ರ (ಅiಣizeಟಿ seಡಿviಛಿe ಛಿeಟಿಣಡಿes) ಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಶಬಾನಾ ಎಂ. ಶೇಕ್ ಅವರು ತಿಳಿಸಿದ್ದಾರೆ.