ಮಡಿಕೇರಿ, ಜ. ೨೯: ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಪೋಸ್ಟರ್ ತಯಾರಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ, ಆರೋಗ್ಯ, ಶಿಕ್ಷಣದ ಬಗ್ಗೆ ಮಾಹಿತಿ ನೀಡಲಾಯಿತು. ಹೆಣ್ಣು ಮಕ್ಕಳ ದಿನದ ಮಹತ್ವ ಸಾರುವ ಪೋಸ್ಟರ್ಗಳನ್ನು ಮಕ್ಕಳು ತಯಾರಿಸಿ ಪ್ರದರ್ಶಿಸಿದರು. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಭಾಗವಹಿಸಿದ್ದರು.