ಮಡಿಕೇರಿ, ಜ. ೩೧: ಮುಳುಗು ತಜ್ಞ, ಮಡಿಕೇರಿಯಲ್ಲಿ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಚೇರಂಬಾಣೆ ನಿವಾಸಿ ಕೊತ್ತೋಳಿ ಮುತ್ತಪ್ಪ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು. ಇದುವರೆಗೆ ೩೮ ಶವಗಳನ್ನು ನೀರಿನಿಂದ ಮೆಲಕ್ಕೆತ್ತಿರುವದಲ್ಲದೆ, ಸಾವಿನಂಚಿನಲ್ಲಿದ್ದ ಸುಮಾರು ೭೦ ಮಂದಿಯನ್ನು ರಕ್ಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುತ್ತಪ್ಪ ಅವರನ್ನು ಸನ್ಮಾನ ಮಾಡಲಾಗಿದೆ. ಇತ್ತೀಚೆಗೆ ನಾಂಗಾಲ ಗ್ರಾಮದಲ್ಲಿ ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಕೂಡ ಮುತ್ತಪ್ಪ ಶವಕ್ಕಾಗಿ ಹುಡುಕಾಟ ನಡೆಸಿದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಅವರುಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.