ನಾಪೋಕ್ಲು, ಜ. ೩೦: ನಾಪೋಕ್ಲುವಿನಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾಂಸ ಸಹಿತ ಬಂಧಿಸಲಾಗಿದೆ. ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅಸ್ಸಾಂ ಮೂಲದ ನೋಬೆಲ್ ಶೇಕ್ ಎಂಬವರ ಮಗ ಗುಲಾಬ್ ಆಲಿ (೫೫) ಸಂತೆ ದಿನವಾದ ಸೋಮವಾರ ಪಟ್ಟಣದಲ್ಲಿ ೫ ಕೆ.ಜಿ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿಯನ್ನು ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹದಿನೈದು ದಿನಗಳ ಕಾಲ ಬಂಧನಕ್ಕೆ ಒಳಪಡಿಸಲಾಗಿದೆ. ಸಿಐ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸದಾಶಿವ, ಎಎಸ್‌ಐ ಗೋಪಾಲಕೃಷ್ಣ, ಸಿಬ್ಬಂದಿಗಳಾದ ಸಜನ್,ರವಿಕುಮಾರ್, ಗಿರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.