ಮಡಿಕೇರಿ, ಜ. ೩೦: ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಸೇನೆಯ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ೧೨೪ನೇ ಜನ್ಮದಿನವನ್ನು ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿ ಯವರು, ಅತಿಥಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಫೀ.ಮಾ. ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.

ವೇದಿಕೆಯಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಡಿಕೇರಿ, ಜ. ೩೦: ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಸೇನೆಯ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ೧೨೪ನೇ ಜನ್ಮದಿನವನ್ನು ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿ ಯವರು, ಅತಿಥಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಫೀ.ಮಾ. ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.

ವೇದಿಕೆಯಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಸಿನಿಮಾ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಶಾಲೆಯ ಕರೆಸ್ಪಾಂಡೆನ್ಸ್ ಕನ್ನಂಡ ಕವಿತ ಬೊಳ್ಳಪ್ಪ, ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ನಂದಿನೆರವAಡ ಚೀಯಣ್ಣ, ಆಡಳಿತಾಧಿಕಾರಿ ಮುಕ್ಕಾಟಿರ ಪೊನ್ನಮ್ಮ, ಪ್ರಾಂಶುಪಾಲೆ ಬಿ.ಎಂ. ಸರಸ್ವತಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕೇಷ್ಮಿಯ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಡೀನ್ ಮಾಚಯ್ಯ ಹಾಗೂ ಹೇಮಂತ್ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಸಾಧನೆಯ ಬಗ್ಗೆ ಭಾಷಣ ಮಾಡಿದರು. ಸೋಹಾಲಿಯ ದೇಚಮ್ಮ ಕಾರ್ಯಕ್ರಮ ನಿರೂಪಿಸಿ, ಗಾನ ಮುತ್ತಮ್ಮ ವಂದಿಸಿದರು. ವಿದ್ಯಾರ್ಥಿಗಳು ಸಮೂಹ ನೃತ್ಯದ ಮೂಲಕ ನಾವೆಲ್ಲ ಭಾರತೀಯರು ಎಂಬ ಸಂದೇಶವನ್ನು ಸಾರಿದರು.