ಮುಳ್ಳೂರು, ಜ. ೩೧: ಸಮೀಪದ ಮಾಲಂಬಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ನಡೆಯಿತು. ಶಾಲೆಯ ಎಸ್‌ಡಿಎಂಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ, ಶಾಲೆಯ ಹಳೆ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.

ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಗ್ರಾಮದ ಹಿರಿಯ ಬಿ.ಎಂ.ಮಾದಪ್ಪ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿವಿಧ ರೀತಿಯ ಪ್ರತಿಭೆಗಳು ಅಡಗಿದ್ದು ಇವುಗಳನ್ನು ಅನಾವಣಗೊಳಿಸಲು ವಾರ್ಷಿಕೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗುತ್ತದೆ ಎಂದರು.

ಸಮಾರೋಪ ಭಾಷಣ ಮಾಡಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಉಪನ್ಯಾಸಕ ಎಂ.ಎಸ್. ಪ್ರಸನ್ನ ಇಂದು ಪ್ರತಿಷ್ಠೆಯ ಹೆಸರಿನಲ್ಲಿ ಪೋಷಕರು ಸರಕಾರಿ ಶಾಲೆಯ ಬಗ್ಗೆ ತಾತ್ಸಾರ ಮನೋಭಾವನೆ ಬೆಳೆಸಿಕೊಂಡಿದ್ದಾರೆ ಈ ಕಾರಣದಿಂದ ಸರಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿದೆ ಈ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.

ಹಿರಿಯ ವಿದ್ಯಾರ್ಥಿ ಎಚ್.ಎಸ್.ಪ್ರೇಮ್‌ನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಹಾಜರಾತಿ ಪ್ರಮಾಣ ಕ್ಷೀಣಿಸುತ್ತಿದ್ದು ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುವಂತೆ ಸಲಹೆ ನೀಡಿದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಎಂ.ಆರ್.ಸುAದರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡ ಮಾಚಯ್ಯ, ಗ್ರಾ.ಪಂ.ಸದಸ್ಯ ಪಿ.ಎನ್.ಗಂಗಾಧರ್, ಸದಸ್ಯೆ ಯಮುನಾ ಸುರೇಶ್, ಸದಸ್ಯೆ ಮುತ್ತಮ್ಮ, ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಎಸ್.ಜೆ.ಪ್ರಸನ್ನಕುಮಾರ್, ಶಾಲಾ ಮುಖ್ಯ ಶಿಕ್ಷಕ ಗಿರೀಶ್, ಗ್ರಾ.ಪಂ.ಪಿಡಿಓ ಹರೀಶ್, ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಸುರೇಂದ್ರ, ಪ್ರಮುಖರಾದ ಎಂ.ಇ.ವೆAಕಟೇಶ್, ಜಾನಕಿ ಗಂಗಾಧರ್, ಶಿಕ್ಷಕಿ ಪಿ.ಎಸ್.ರತ್ನ, ಲೀಲಾ ದೇವದಾಸ್, ಶ್ವೇತ, ಅಂಗನವಾಡಿ ಶಾಲಾ ಶಿಕ್ಷಕಿ ವೇಧಕುಮಾರಿ ಮುಂತಾದವರಿದ್ದರು. ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.