ಮಡಿಕೇರಿ: ಮದೆನಾಡು ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಳಿಕಟ್ಟೆಯಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪಿ.ಯು. ಸುಂದರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಶಂಭು, ಉಪಾಧ್ಯಕ್ಷೆ ಬಿ.ಎಸ್. ಉಮಾವತಿ, ಸದಸ್ಯೆ ಗೀತಾ, ಅಡುಗೆ ಸಹಾಯಕಿ ರಾಧಮ್ಮ ಹಾಜರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ.ಕೆ. ಬಾಲಕೃಷ್ಣ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಳೆದ ಸಾಲಿನಲ್ಲಿ ೭ನೇ ತರಗತಿಯಲ್ಲಿ ಉತ್ತೀರ್ಣರಾದ ವಿಜಯ್ ಮತ್ತು ಆಯೇಷಾ ಅವರಿಗೆ ಪ್ರೋತ್ಸಾಹ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಕೋಮಲ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.ಚೆಯ್ಯAಡಾಣೆ: ಕಕ್ಕಬ್ಬೆಯ ಸಮಾಜ ಕಲ್ಯಾಣ ಇಲಾಖೆಯ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ೭೪ನೇ ಗಣರಾಜ್ಯೋತ್ಸವ ವನ್ನು ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ನಂತರ ಮುಖ್ಯ ಶಿಕ್ಷಕಿ ಕೆ.ಎಂ. ಸುಮಯ್ಯ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಕುರಿತು ಮಾಹಿತಿಯಿತ್ತರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ಮೂಡಿಬಂತು. ಈ ಸಂದರ್ಭ ಸಹ ಶಿಕ್ಷಕರಾದ ಕವಿತ, ಅಶ್ವಿನಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.ಚೆಯ್ಯಂಡಾಣೆ: ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸ ಲಾಯಿತು. ಶಾಲಾ ಶಿಕ್ಷಕಿ ಸುನಿತಾ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ ರಾಜಕುಮಾರ್ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ನಾಡಗೀತೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ನಿರೂಪಣೆಯನ್ನು ಶಿಕ್ಷಕ ರವೀಂದ್ರನಾಥ್, ಸ್ವಾಗತವನ್ನು ಪೊನ್ನಪ್ಪ, ವಂದನೆಯನ್ನು ಹೇಮಮಾಲಿನಿ ನೆರವೇರಿಸಿದರು.ಚೆಯ್ಯಂಡಾಣೆ: ಕರಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಧ್ವಜಾರೋಹಣವನ್ನು ನರಿಯಂದಡ ಗ್ರಾಮ ಪಂಚಾಯಿತಿಯ ಸದಸ್ಯೆ ಎಂ.ಬಿ. ನೇತ್ರಾವತಿ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳು ಪ್ರಾರ್ಥಿಸಿದರೆ, ಮುಖ್ಯ ಶಿಕ್ಷಕಿ ಲೀಲಾವತಿ ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ಹಾಡು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಇದೇ ಸಂದರ್ಭ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಪೋಷಕರು ಇದ್ದರು. ಶಿಕ್ಷಕಿ ಬಿ.ಎ. ದಮಯಂತಿ ಸರ್ವರನ್ನು ವಂದಿಸಿದರು. ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸಲಹಾ ಸಮಿತಿಯ ಸದಸ್ಯರಾದ ಬೇಪುಡಿಯಂಡ ಬಿದ್ದಪ್ಪ ಅವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.ಸೋಮವಾರಪೇಟೆ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕಾಫಿ ಮಂಡಳಿ ವತಿಯಿಂದ ೭೪ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ರೂಪಾ ಸತೀಶ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿಗಳು ಇದ್ದರು. ಸರ್ಕಾರಿ ನೌಕರರ ಸಂಘದಲ್ಲಿ ಸಂಘದ ಅಧ್ಯಕ್ಷ ಪ್ರದೀಪ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು. ಇಲ್ಲಿನ ಎಸ್.ಜೆ.ಎಂ., ವಿಶ್ವಮಾನವ ಕುವೆಂಪು, ಸಾಂದೀಪನಿ, ಒಎಲ್‌ವಿ ಕಾನ್ವೆಂಟ್ ಸೇರಿದಂತೆ ವಿವಿಧ ಶಾಲೆಗಳಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.ಸೋಮವಾರಪೇಟೆ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕಾಫಿ ಮಂಡಳಿ ವತಿಯಿಂದ ೭೪ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ರೂಪಾ ಸತೀಶ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿಗಳು ಇದ್ದರು. ಸರ್ಕಾರಿ ನೌಕರರ ಸಂಘದಲ್ಲಿ ಸಂಘದ ಅಧ್ಯಕ್ಷ ಪ್ರದೀಪ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು. ಇಲ್ಲಿನ ಎಸ್.ಜೆ.ಎಂ., ವಿಶ್ವಮಾನವ ಕುವೆಂಪು, ಸಾಂದೀಪನಿ, ಒಎಲ್‌ವಿ ಕಾನ್ವೆಂಟ್ ಸೇರಿದಂತೆ ವಿವಿಧ ಶಾಲೆಗಳಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.ಕುಶಾಲನಗರ: ಕುಶಾಲನಗರ ಡಿವೈಎಸ್‌ಪಿ ಮತ್ತು ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಡಿವೈಎಸ್‌ಪಿ ಆರ್. ಗಂಗಾಧರಪ್ಪ ಧ್ವಜಾರೋಹಣ ನೆರವೇರಿಸಿದರು. ಪಟ್ಟಣ, ಗ್ರಾಮಾಂತರ ಮತ್ತು ಸಂಚಾರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಇದ್ದರು.