ಮಡಿಕೇರಿ, ಜ. ೩೦: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ಜರುಗಿತು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ರಾಕೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟçಗೀತೆ ಹಾಡಿದರು.

ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಲಿಯಾಕತ್ ಅಲಿ ಹಾಗೂ ಸಂತ ಮೈಕಲರ ಶಾಲೆಯ ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ (ಸಂತೋಷ್ ಭಟ್), ಬೈಬಲ್ (ಸಗಾಯ ಮೇರಿ), ಕುರಾನ್ (ಇಸಾಕ್ ಮೌಲ್ವಿ) ಸಂದೇಶಗಳ ಪಠಣ ಮಾಡಲಾಯಿತು.

ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ

ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸ ಲಾಯಿತು.

ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಓ ಡಾ. ಎಸ್. ಆಕಾಶ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್, ಸದಸ್ಯರಾದ ತೋರೇರ ಮುದ್ದಯ್ಯ, ಕೆ.ಟಿ. ಬೇಬಿ ಮ್ಯಾಥ್ಯು, ಅಂಬೆಕಲ್ಲು ನವೀನ್, ಎಸ್.ಪಿ. ವಾಸುದೇವ, ಎಂ.ಎನ್. ಸುಬ್ರಮಣಿ, ಜಿ.ಸಿ. ರಮೇಶ್, ಸೂರಯ್ಯ ಅಬ್ರಾರ್, ಚಂದ್ರಶೇಖರ್, ರೇವತಿ ರಮೇಶ್, ಮಿನಾಜ್,

(ಮೊದಲ ಪುಟದಿಂದ) ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಸಹಾಯಕ ಖಜಾನಾಧಿಕಾರಿ ಕಲ್ಪನ, ಶ್ಯಾಮ್ ಸುಂದರ್, ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್, ನಗರಸಭೆ ಪೌರಾಯುಕ್ತ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಂಪತ್ ಕುಮಾರ್, ಭಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸಿಕ್ವೇರಾ, ದಮಯಂತಿ ಮತ್ತಿತರರು ಇದ್ದರು.

ಸರ್ವೋದಯ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಇರುವುದು ಇಡೀ ರಾಷ್ಟçದಲ್ಲೇ ವಿಶೇಷವಾಗಿದೆ. ಆ ದಿಸೆಯಲ್ಲಿ ನಗರದ ಗಾಂಧೀ ಮಂಟಪದಲ್ಲಿ ಚಿತಾಭಸ್ಮವಿಟ್ಟು ‘ರಾಜ್‌ಘಾಟ್’ ಮಾದರಿಯಲ್ಲಿ ‘ಗಾಂಧಿ ಸ್ಮಾರಕ ನಿರ್ಮಾಣ’ಕ್ಕೆ ಮುಂದಾಗಲಾಗಿದ್ದು, ಜಿಲ್ಲಾಧಿಕಾರಿ ಅವರು ೩೦ ಸೆಂಟು ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಿದ್ದಾರೆ ಎಂದರು.