ಮುಳ್ಳೂರು, ಜ. ೩೧: ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ಬೆಂಗಳೂರು ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ. ಎನ್. ಈಶ್ವರ್ ಹೇಳಿದರು.
ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾರತಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಶನಿವಾರಸಂತೆ ಲಯನ್ಸ್ ಕ್ಲಬ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಜಿಲ್ಲೆ ಹಾಗೂ ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶನಿವಾರಸಂತೆ ಲಯನ್ಸ್ ಕ್ಲಬ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಜಿಲ್ಲೆ ಹಾಗೂ ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೂಲಕ ಆರೋಗ್ಯ ಕಾಳಜಿ ಹೊಂದಿದೆ ಎಂದರು. ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಪಿ. ಶೇಷಾದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾರತಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಎಂ. ಜಗನ್ಪಾಲ್, ಲಯನ್ಸ್ ಕ್ಲಬ್ ಖಜಾಂಚಿ ಬಿ.ಕೆ. ಚಿಣ್ಣಪ್ಪ, ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಇ.ಎಂ. ದಯಾನಂದ್, ಲಯನ್ಸ್ ಪ್ರಮುಖರಾದ ನಾರಾಯಣ ಸ್ವಾಮಿ, ಪರಮೇಶ್, ಕೆ.ಎನ್. ಕಾರ್ಯಪ್ಪ, ರಾಷ್ಟಿçÃಯ ಸೇವಾ ಘಟಕದ ಯೋಜನಾಧಿಕಾರಿ ಎಂ.ಎನ್. ಹರೀಶ್, ಹಿರಿಯ ಉಪನ್ಯಾಸಕ ಮೋಹನ್ ಮುಂತಾದವರಿದ್ದರು.