ಕುಶಾಲನಗರ, ಜ. ೩೧: ಕುಶಾಲನಗರ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ ಮನವಿ ಮಾಡಿದರು.

ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸ್ಥಳೀಯ ರೈತ ಸಹಕಾರ ಭವನದಲ್ಲಿ ತಾ. ೩ ರಂದು ನಡೆಯಲಿರುವ ಸಮ್ಮೇಳನದ ಪೂರ್ವ ಸಿದ್ಧತೆಗಳು ಬಹುತೇಕ ನಡೆದಿದ್ದು, ವಿವಿಧ ಉಪಸಮಿತಿಗಳ ಮೂಲಕ ಕೆಲಸ ಕಾರ್ಯಗಳು ನಡೆಯುತ್ತಿವೆ ಎಂದರು. ರೈತ ಸಹಕಾರ ಭವನ ಆವರಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ನಂತರ ಏಕಕಾಲಕ್ಕೆ ಕುಶಾಲನಗರ ಪಟ್ಟಣದ ಸರಹದ್ದಿನಲ್ಲಿ ಗಣ್ಯರ ಹೆಸರಿನ ನೆನಪಿನ ದ್ವಾರಗಳ ಉದ್ಘಾಟನೆ ನಡೆಯಲಿದೆ.

ಸಭಾಂಗಣ ಮತ್ತು ವೇದಿಕೆ ಉದ್ಘಾಟನೆ ನಂತರ ೮.೩೦ಕ್ಕೆ ಸಮ್ಮೇಳನಾಧ್ಯಕ್ಷರಾದ ಹಿರಿಯ ಪತ್ರಕರ್ತ ಹಾಗೂ ಸಾಹಿತಿಗಳಾದ ಬಿ.ಆರ್. ನಾರಾಯಣ ಅವರನ್ನು ಗಡಿ ಭಾಗದ ಕಾವೇರಿ ನದಿ ದಂಡೆಯಿAದ ರೈತ ಸಹಕಾರ ಭವನದ ವೇದಿಕೆವರೆಗೆ ಅದ್ಧೂರಿ ಮೆರವಣಿಗೆಯೊಂದಿಗೆ ಕರೆ ತರಲಾಗುವುದು. ಕಲಾ ತಂಡಗಳು, ವಿವಿಧ ಮಳಿಗೆಗಳ ಉದ್ಘಾಟನೆ ಯೊಂದಿಗೆ ಬೆಳಗ್ಗೆ ೧೦.೩೦ಕ್ಕೆ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮ ಜರುಗಲಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಉದ್ಘಾಟನೆ, ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಅವರಿಂದ ಆಶಯ ನುಡಿಗಳು ಹಾಗೂ ಸಮ್ಮೇಳನಾಧ್ಯಕ್ಷ ರಿಂದ ಭಾಷಣ ನಡೆಯಲಿದೆ ಎಂದರು.

೨ ಗಂಟೆಯಿAದ ವಿಚಾರಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ನಂತರ ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭ ತದನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಈ ಸಂದರ್ಭ ಆರ್ಥಿಕ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಆಹಾರ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮತ್ತು ಉಪಸಮಿತಿಗಳ ಪ್ರಮುಖರು ಸಮ್ಮೇಳನದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪ್ರೊ. ಹೆಚ್.ಬಿ. ಲಿಂಗಮೂರ್ತಿ, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಮೆರವಣಿಗೆ ಸಮಿತಿಯ ಅಧ್ಯಕ್ಷ ವೆಂಕಟೇಶ್ ಪೂಜಾರಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಟಿ.ವಿ. ಶೈಲ, ವೇದಿಕೆ ನಿರ್ವಹಣಾ ಸಮಿತಿಯ ಅಧ್ಯಕ್ಷ ಟಿ.ಜಿ. ಪ್ರೇಮ್‌ಕುಮಾರ್, ಅಲಂಕಾರ ಸಮಿತಿಯ ಅಧ್ಯಕ್ಷ ಹೆಚ್.ಎಂಚAದ್ರು ಮತ್ತಿತರರು ಇದ್ದರು.