ಮಡಿಕೇರಿ, ಜ. ೩೧: ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಹಿನ್ನೆಲೆ ಬೂತ್ ಮಟ್ಟದಿಂದ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಚಾರದ ಕುರಿತು ಕೆಪಿಸಿಸಿ ನಿರ್ದೇಶನದಡಿ ಕೆಲಸ ಆರಂಭಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೩ ಹಾಗೂ ಪ್ರತಿ ಬೂತ್‌ಗೆ ಒಂದು ಸಂಯೋಜಕರನ್ನು ಆಯಾ ಬೂತ್‌ಗಳ ಅಧ್ಯಕ್ಷರ ಸಲಹೆಯಂತೆ ನೇಮಿಸಲಾಗುವುದು. ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿ ವೈಫಲ್ಯಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಘೋಷಿಸಿರುವ ಗೃಹಲಕ್ಷಿö್ಮ ಹಾಗೂ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗುತ್ತದೆ ಎಂಬುದರ ‘ಗ್ಯಾರೆಂಟಿ ಕಾರ್ಡ್’ ಅನ್ನು ಪ್ರತಿಯೊಬ್ಬರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದ ಅವರು, ಫೆ. ೩ ರಿಂದ ಮುಂದಿನ ಒಂದು ತಿಂಗಳು ತಂಡವಾಗಿ ಜಿಲ್ಲಾ ವ್ಯಾಪಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುವುದು. ೧೦ ಮತಗಟ್ಟೆಗಳಿಗೆ ಒಂದರAತೆ ಸದಸ್ಯತ್ವ ನೋಂದಣಿ ಕೇಂದ್ರ ತೆರೆಯಲಾಗುವುದು. ಈ ಮೂಲಕ ಪಕ್ಷಕ್ಕೆ ಸೆಳೆಯುವ ಕೆಲಸ ಮಾಡಲಾಗುತ್ತದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಡಿಕೇರಿ ಬ್ಲಾಕ್ ಉಪಾಧ್ಯಕ್ಷ ಲಿಯಾಕತ್ ಅಲಿ, ನಗರಾಧ್ಯಕ್ಷ ರಾಜೇಶ್ ಯಲ್ಲಪ್ಪ ಹಾಜರಿದ್ದರು.