ಮಡಿಕೇರಿ, ಫೆ. ೧: ಗ್ರಾಮ ಒನ್, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮುಖ್ಯ ಮಂತ್ರಿಗಳು ಈ ಯೋಜನೆಯನ್ನು ವರ್ಷ ೨೦೨೦-೨೧ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಗ್ರಾಮಗಳಲ್ಲಿಯೇ ತಲುಪಿಸುವ ಗುರಿಯನ್ನು ಹೊಂದಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ೧೦೪ ಗ್ರಾಮ ಪಂಚಾಯಿತಿಗಳಿAದ ಒಟ್ಟು ೧೧೬ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಸರ್ಕಾರವು ಅನುಮತಿ ನೀಡಿದೆ. ಅದರಂತೆ ನಮ್ಮ ಜಿಲ್ಲೆಯಲ್ಲಿ ಒಟ್ಟು ೯೨ ಗ್ರಾಮ ಪಂಚಾಯಿತಿಗಳಿAದ ೧೦೪ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ೨೦೨೨ರ ಜನವರಿ, ೨೬ ರಂದು ಗ್ರಾಮ ಒನ್ ಕೇಂದ್ರಗಳು ಪ್ರಾರಂಭಗೊAಡಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಒಟ್ಟು ೮೦ ವಿವಿಧ ಇಲಾಖೆಗಳಿಂದ ೮೦೦ ಸೇವೆಗಳನ್ನು ಒದಗಿಸಲಾಗುತ್ತಿದೆ.

ಜಿಲ್ಲೆಗೆ ಅನುಗುಣವಾಗುವಂತೆ, ಇಲ್ಲಿಯವರೆಗೂ ಒಟ್ಟು ಗ್ರಾಮ ಒನ್ ಕೇಂದ್ರ ಸೇವಾ ಸಿಂಧು ಮುಖಾಂತರ ೫೬,೫೬೯ ವಹಿವಾಟುಗಳನ್ನು, ಎಬಿಎಆರ್‌ಕೆ ಮುಖಾಂತರ ೪,೯೯೯ ನೋಂದಣಿಗಳನ್ನು ಹಾಗೂ ೭೫,೫೭೯ ಅಭಾ ಕಾರ್ಡ್ ನೋಂದಣಿಗಳನ್ನು ಮಾಡಲಾಗಿರುತ್ತದೆ. ೨೦೨೨ ರ ಜನವರಿ, ೨೬ ರಿಂದ ೨೦೨೩ ರ ಜನವರಿ, ೨೨ ರವರೆಗೆ ಒಟ್ಟು ೧,೩೭,೧೪೭ ವಹಿವಾಟುಗಳನ್ನು ಗ್ರಾಮ ಒನ್ ಕೇಂದ್ರದ ಮುಖಾಂತರ ಮಾಡಲಾಗಿದೆ.

ಈ ಯೋಜನೆಯನ್ನು ನಾಗರಿಕ ಕೇಂದ್ರಿತ ಸೇವೆಗಳಾದ ಜಿ೨ಸಿ ಸೇವೆಗಳು, ಬ್ಯಾಂಕಿAಗ್ ಸೇವೆಗಳು, ಆರ್.ಟಿ.ಐ. ಪ್ರಶ್ನೆಗಳು ಹಾಗೂ ಇನ್ನಿತರೇ ಸೇವೆಗಳನ್ನು ಗ್ರಾಮ ಮಟ್ಟದಲ್ಲಿ ಎಲ್ಲಾ ನಾಗರಿಕರಿಗೆ ತಲುಪಿಸುವ ಏಕ-ಬಿಂದು ಸಹಾಯ ಕೇಂದ್ರವಾಗಿರುವAತೆ ಯೋಜಿಸಲಾಗಿದೆ. ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಹೀಗಿವೆ: ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ, ತಾಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.

ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ. ಗ್ರಾಮ ಒನ್ ಕೇಂದ್ರಗಳ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.

ಗ್ರಾಮ ಮಟ್ಟದಲ್ಲಿ ಉದ್ಯೋಗಾ ವಕಾಶಗಳು ಸೃಷ್ಟಿಯಾಗುತ್ತವೆ. ಪ್ರತಿ ಗ್ರಾಮ ಒನ್ ಕೇಂದ್ರವು ಮೈಕ್ರೋ ಬ್ಯಾಂಕಿAಗ್ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡುವ ಮೂಲಕ ಆರ್ಥಿಕ ಸೇರ್ಪಡೆಯನ್ನು ಸಾಧಿಸಲಾಗುತ್ತದೆ.

ಸರ್ಕಾರದ ಸೇವೆಗಳನ್ನು ಪಡೆಯಲು ನಾಗರಿಕರು ಯಾರನ್ನೂ (ಮಧ್ಯವರ್ತಿ) ಅವಲಂಬಿಸ ಬೇಕಾಗಿಲ್ಲವಾದ್ದರಿಂದ ಸ್ವಾವಲಂಬನಾ ಮನೋಭಾವವನ್ನು ಎತ್ತಿಹಿಡಿ ದಂತಾಗಿದೆ. ಸೇವೆಗಳ ಸಮಯೋಚಿತ ಮತ್ತು ಗುಣಮಟ್ಟದ ವಿತರಣೆಯ ಮೂಲಕ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.