ಮಡಿಕೇರಿ, ಫೆ. ೧: ಜಿಲ್ಲಾ ವಲಯ ಕೈಮಗ್ಗ ಉದ್ದಿಮೆಗಳಿಗೆ ಸಹಾಯ ಯೋಜನೆಯಡಿ ೨೦೨೨-೨೩ ನೇ ಸಾಲಿನಲ್ಲಿ ಕಾವೇರಿ ವಸ್ತçಸಿರಿ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ತಾ. ೯ ರಿಂದ ೧೫ ರವರೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ತಾ. ೯ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.