*ಗೋಣಿಕೊಪ್ಪ, ಫೆ. ೧: ತಾಲೂಕಿನ ವಿವಿಧ ಆರೋಗ್ಯ ಕೇಂದ್ರಗಳಿಗೆ ರೂ. ೧೪ ಲಕ್ಷದ ವೆಚ್ಚದ ವೈದ್ಯಕೀಯ ಉಪಕರಣಗಳನ್ನು ಶಾಸಕ ಕೆ.ಜಿ ಬೋಪಯ್ಯ ವಿತÀರಿಸಿದರು. ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವೀರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಆರೋಗ್ಯ ಕೇಂದ್ರಗಳ ಬಳಕೆಗೆ ಉಪಕರಣಗಳನ್ನು ಹಸ್ತಾಂತರಿಸಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೋಣಿಯಂಡ ಅಪ್ಪಣ್ಣ, ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್, ವೀರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್‌ಗಣಪತಿ, ವೀರಾಜಪೇಟೆ ಮಂಡಲ ಸದಸ್ಯ ಆದೇಂಗಡ ವಿನು ಚಂಗಪ್ಪ, ವೀರಾಜಪೇಟೆ ತಾಲೂಕು ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನು, ಪೊನ್ನಂಪೇಟೆ ಶಕ್ತಿ ಕೆಂದ್ರ ಪ್ರಮುಖ್ ಕೊಟೇರ ಕಿಶನ್, ಮೂಕಳೆರ ಮಧು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.