ಸೋಮವಾರಪೇಟೆ, ಫೆ. ೧: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜಳ್ಳಿ-ಕೋಟೆಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ಜೋಡಿ ಬಸವೇಶ್ವರ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ತಪೋಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಶ್ರೀಮಹಾಂತ ಶಿವಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೂತನ ದೇವಾಲಯಕ್ಕೆ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಗ್ರಾ.ಪಂ. ಸದಸ್ಯ ನವೀನ್ ಅಜ್ಜಳ್ಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲೋಹಿತ್, ಪ್ರಮುಖರಾದ ದಿಲೀಪ್, ಮಧು, ವಸಂತ್, ರವಿ, ಭರತ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.