ಮಡಿಕೇರಿ, ಫೆ. ೧: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನಿಸಿದೆ.

ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುರ‍್ರಚಿಸಲು ನಿರ್ಧರಿಸಲಾಗಿದೆ. ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡAತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಮಣ್ಯ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ. ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬAಧಿಸಿದAತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ. ಆದ್ದರಿಂದ ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರು “ಪುಸ್ತಕ ನೀತಿ”ಯಲ್ಲಿ ಅಳವಡಿಸಬೇಕಾದ ಅಂಶಗಳ ಬಗ್ಗೆ ತಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು ತಾ. ೧೦ ರೊಳಗೆ ಅಂಚೆ ಮೂಲಕ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ೧ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಇಲ್ಲವೇ ಪ್ರಾಧಿಕಾರದ ಇ-ಮೇಲ್ ವಿಳಾಸ ಞಚಿಟಿಟಿಚಿಜಚಿಠಿಠಿಡಿಚಿಜhiಞಚಿಡಿಚಿ @gmಚಿiಟ.ಛಿom ಮೂಲಕವೂ ಕಳುಹಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.