ಸೋಮವಾರಪೇಟೆ, ಫೆ. ೧: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂಲಕ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಐಗೂರು ಸರ್ಕಾರಿ ಪ್ರೌಢಶಾಲೆಯ ಸ್ನೇಹಾ, ನೆಲ್ಲಿಹುದಿಕೇರಿಯ ಅಸ್ಮಿಯಾ, ಅಂಕನಳ್ಳಿಯ ಅಭಿಷೇಕ್ ಅವರುಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಲ್ಯಾಪ್‌ಟಾಪ್ ನೀಡಲಾಯಿತು. ಇದರೊಂದಿಗೆ ಹತ್ತನೇ ತರಬೇತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ನಗದು ಬಹುಮಾನ ನೀಡಲಾಯಿತು.

ಈ ಸಂದರ್ಭ ತಹಶೀಲ್ದಾರ್ ಎಸ್.ಎನ್. ನರಗುಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಸದಸ್ಯ ಬಿ.ಆರ್. ಮಹೇಶ್, ಎಸ್.ಆರ್. ಸೋಮೇಶ್, ಶರತ್‌ಚಂದ್ರ, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಣ್ಣಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.