ಗುಡ್ಡೆಹೊಸೂರು: ಇಲ್ಲಿನ ಬಿ.ಜೆ.ಪಿ. ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸರಕಾರಗಳ ಸಾಧನೆಯ ಬಗ್ಗೆ ಭಿತ್ತಿಪತ್ರಗಳನ್ನು ಮನೆಮನೆಗೆ ತೆರಳಿ ವಿತರಿಸುವ ಕಾರ್ಯಕ್ಕೆ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ಈ ಸಂದರ್ಭ ಇಲ್ಲಿನ ಶಕ್ತಿ ಕೇಂದ್ರದ ಅಧ್ಯಕ್ಷರಾದ ನಿತ್ಯಾನಂದ ಮತ್ತು ಪ್ರವೀಣ್, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ನಂದಿನಿ, ಸದಸ್ಯರಾದ ಪ್ರದೀಪ್, ಗಂಗಮ್ಮ, ರುಕ್ಮಿಣಿ, ಕುಡೆಕ್ಕಲ್ ಶೀಲಾ, ಸೌಮ್ಯ ಮತ್ತು ಬೂತ್ ಅಧ್ಯಕ್ಷ ನವೀನ್ ಮುಂತಾದವರು ಹಾಜರಿದ್ದರು.

ಸುಂಟಿಕೊಪ್ಪ: ಮಾದಾಪುರ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದಿAದ ಮಾದಾಪುರ ಸಮುದಾಯ ಭವನದಲ್ಲಿ ವಿಜಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಸರಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿದೆಯೆ ಎಂಬುದನ್ನು ಕಾರ್ಯಕರ್ತರು ಪರಿಶೀಲಿಸಬೇಕು ಎಂದು ಹೇಳಿದರು. ಮಾದಾಪುರ, ಗರ್ವಾಲೆ ಹಾಗೂ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಪಾಲ್ಗೊಂಡ ಈ ಸಭೆಯಲ್ಲಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನು ರೈ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ದರ್ಶನ್ ಜೋಯಪ್ಪ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ನಾಪಂಡ ಉಮೇಶ್, ಮಾದಾಪುರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕೆ. ಗಣೇಶ, ಮಾಜಿ ಜಿ.ಪಂ. ಸದಸ್ಯ ಟಿ.ಪಿ. ಸಂದೇಶ, ಮಡಿಕೇರಿ ವಿಧಾನ ಕ್ಷೇತ್ರದ ಉಸ್ತುವಾರಿ ವಿಕ್ರಂ, ಸೋಮವಾರಪೇಟೆ ಬಿಜೆಪಿ ಉಪಾಧ್ಯಕ್ಷ ಎಂ.ಎ. ಪ್ರಭಾಕರ, ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ನಿರೂಪ, ಉಪಾಧ್ಯಕ್ಷೆ ಜ್ಯೋತಿ, ಗ್ರಾ.ಪಂ. ಸದಸ್ಯರುಗಳಾದ ಬಿದ್ದಪ್ಪ, ಗಿರೀಶ, ಸುರೇಶ ಮೊದಲಾದವರು ಉಪಸ್ಥಿತರಿದ್ದರು.