ಕುಶಾಲನಗರ, ಫೆ. ೨: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ಮನೆ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರÀ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಪೋಕ್ಲು ಇಬ್ರಾಹಿಂ, ಸುದೀಪ್ ಮತು ವಾಸಿಂ ಎಂಬ ಮೂರು ಮಂದಿ ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಂಡಿದ್ದಾರೆ. ಕುಶಾಲನಗರ ಮಾರುಕಟ್ಟೆ ರಸ್ತೆಯ ವ್ಯಾಪಾರಿಯೊಬ್ಬರ ಮನೆ ಕಳ್ಳತನ ಸೇರಿದಂತೆ ಕಳವಾದ ಸುಮಾರು ೨೫೦ ಗ್ರಾಂ ಗಳಿಗೂ ಅಧಿಕ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರ ಡಿವೈಎಸ್‌ಪಿ ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುಶಾಲನಗರ ಪಟ್ಟಣ ಠಾಣಾಧಿಕಾರಿ ಅಪ್ಪಾಜಿ, ಅಪರಾಧ ಪತ್ತೆದಳ ತಂಡ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.