ಮಡಿಕೇರಿ, ಫೆ. ೨: ಹೊಗಳಿಕೆ ಮತ್ತು ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತಲೆ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ್ದೇನೆ. ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ತಲಾ ೨ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಿದ್ದು, ಈ ಬಗ್ಗೆ ಶ್ವೇತ ಪತ್ರ ಬಿಡುಗಡೆಗೂ ಸಿದ್ಧವಿರುವುದಾಗಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.

ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸಂವಾದ ಕಾರ್ಯದಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು. ಪ್ರಸಕ್ತ ಆರ್ಥಿಕ ಸಾಲಿನಲ್ಲೆ ಕ್ಷೇತ್ರಕ್ಕೆ ೫೫೦೮ ಲಕ್ಷ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ದೊರಕಿದೆ.

ವೀರಾಜಪೇಟೆ ಕ್ಷೇತ್ರದ ಪೊನ್ನಂಪೇಟೆ ವ್ಯಾಪ್ತಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ, ಕೊಂಗಣ ಹೊಳೆಯಿಂದ ನೀರು ಸರಬರಾಜಿನ ಯೋಜನೆ ಕಾರ್ಯಗತಗೊಳಿಸಲು ಉತ್ತಮ ಅವಕಾಶವಿದೆ. ವೀರಾಜಪೇಟೆ ಸೇರಿದಂತೆ ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಬೋರ್‌ವೆಲ್‌ಗಳು ವಿಫಲವಾಗುತ್ತಿರುವುದರಿಂದ ಅವುಗಳನ್ನು ನೀರಿನ ಮೂಲವಾಗಿ ಪರಿಗಣಿಸಲು ಸಾಧ್ಯವಾಗಲಾರದು. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ೬೦:೪೦ ಅನುಪಾತ ಅನುದಾನದಲ್ಲಿ ಪ್ರತಿ ಮನೆಗೆ ನಲ್ಲಿ ನೀರನ್ನು ಕಲ್ಪಿಸಲಾಗುತ್ತದೆಯಾದರೂ, ಇದರಲ್ಲಿ ಬೋರ್‌ವೆಲ್‌ಗಳನ್ನು ನೀರಿನ ಮೂಲವಾಗಿ ಪರಿಗಣಿಸುವುದು ಜಿಲ್ಲೆಗೆ ಸಂಬAಧಿಸಿದAತೆ ಉಚಿತವಲ್ಲ ವೆಂದು

(ಮೊದಲ ಪುಟದಿಂದ) ತಿಳಿಸಲಾಗಿದೆ ಎಂದು ಬೋಪಯ್ಯ ಮಾಹಿತಿ ನೀಡಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಮಲ್ಟಿ ವಿಲೇಜ್ ಯೋಜನೆಯಡಿ ಬರಪೊಳೆ, ಕಾವೇರಿ ಮತ್ತು ಕೊಂಗಣ ಹೊಳೆಯನ್ನು ಬಳಸಿ ಗ್ರಾಮೀಣ ಭಾಗಗಳಿಗೆ ನೀರೊ ದಗಿಸುವ ಚಿಂತನೆ ಇದೆ. ಜಲಜೀವನ್ ಮಿಷನ್ ಮತ್ತು ಮಲ್ಟಿ ವಿಲೇಜ್ ಸ್ಕೀಂಗಳೆರಡರಿAದ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರಲ್ಲದೆ, ಅಮೃತ್ ಯೋಜನೆಯಡಿ ಕಾವೇರಿ ನದಿ ನೀರನ್ನು ವೀರಾಜಪೇಟೆ ಸುತ್ತಮುತ್ತಲ ವ್ಯಾಪ್ತಿಗೆ ಮತ್ತು ಕುಶಾಲನಗರಕ್ಕೆ ಒದಗಿಸುವ ೬೪ ಕೋಟಿ ರೂ. ವೆಚ್ಚದ ಯೋಜನೆ ಇರುವುದಾಗಿ ತಿಳಿಸಿದರು.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ವಿವಿಧ ವನ್ಯ ಜೀವಿಗಳ ಹಾವಳಿಯ ಗಂಭೀರ ಸಮಸ್ಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಎಸಿ ಕೊಠಡಿಗಳಲ್ಲಿ ಕುಳಿತು ಅಧಿಕಾರಿಗಳು ತೆಗೆದುಕೊಳ್ಳ್ಳುವ ನಿಲುವುಗಳಿಂದ ಸಮಸ್ಯೆ ಉಲ್ಬಣಿಸಿದೆ. ವನ್ಯ ಪ್ರಾಣಿಗಳಿಗೆ ಅರಣ್ಯದಲ್ಲಿ ಅಗತ್ಯ ಆಹಾರ ಮತ್ತು ನೀರು ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಇದಕ್ಕೆ ಮೂಲ ಕಾರಣ. ಸರ್ಕಾರ ಆದೇಶಗಳನ್ನು ಮಾಡಬಹುದಾದರು, ಅದನ್ನು ಅನುಷ್ಟಾನಗೊಳಿಸುವ ಅಧಿಕಾರಿ ವರ್ಗ ಆ ನಿಟ್ಟಿನಲ್ಲಿ ಕೆಲಸ ಮಾಡ ದಿದ್ದಲ್ಲಿ ಸಮಸ್ಯೆ ಬಗೆಹರಿ ಯುವುದಿಲ್ಲವೆಂದು ವಿಷಾದಿಸಿದರು.

ಕಾಡಾನೆ ಹಾವಳಿ ತಡೆಗೆ ಅಲ್ಲಲ್ಲಿ ಸೋಲಾರ್ ಬೆೆÃಲಿಗಳನ್ನು, ಕಂದಕಗಳನ್ನು ನಿರ್ಮಿಸ ಲಾಗಿದೆಯಾದರು, ಅವುಗಳ ಸಮರ್ಪಕ ನಿರ್ವಹಣೆಯಾಗುತ್ತಿಲ್ಲ. ಜಿಲ್ಲೆಯನ್ನು ಸುತ್ತುವರೆದಿರುವ ನಾಲ್ಕು ವನ್ಯ ಜೀವಿ ಸಂರಕ್ಷಣಾ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ಅಗತ್ಯವಾದ ಆಹಾರ, ನೀರು ಲಭ್ಯವಾಗುತ್ತಿಲ್ಲ. ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು ಏಕ ರೂಪದ ತೇಗದ ಕಾಡು ರೂಪಿಸು ತ್ತಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭ ಅರಣ್ಯ ಸಚಿವರಾಗಿ ಮಲೆನಾಡು ಭಾಗದ ಜನಪ್ರತಿನಿಧಿಗೆ ಅವಕಾಶ ನೀಡಬೇಕೆಂದು ನಾನು ಸಲಹೆ ನೀಡಿದ್ದೇನೆ. ಕಾಡು ಎನ್ನುವುದು ಏನೆಂದೇ ತಿಳಿಯದವರು ಅರಣ್ಯ ಸಚಿವರಾಗುವುದರಿಂದ ಸಮಸ್ಯೆಗೆ ಪರಿಹಾರ ರೂಪಿಸುವುದು ಕಷ್ಟವೆಂದು ಕೆಜಿಬಿ ಅಭಿಪ್ರಾಯಿಸಿದರು.

ಭಾಗಮಂಡಲದ ಮೇಲ್ಸೇತುವೆ ಕಾಮಗಾರಿ ವಿಳಂಬಗೊಳ್ಳುತ್ತಿರುವ ಹಿನ್ನೆಲೆ, ಮುಂಗಾರಿನ ಅವಧಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣª Áಗದಂತೆ ಕಳೆದ ಬಾರಿ ನದಿಯ ಹೂಳೆತ್ತಲಾಗಿತ್ತು. ಇದರಿಂದ ದೊಡ್ಡ ಪ್ರಮಾಣದ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿಲ್ಲ. ಇದೀಗ ತಲಕಾವೇರಿಯ ಕೆಲ ಭಾಗದಲ್ಲಿ ನದಿ ಹರಿಯುವ ಪ್ರದೇಶದಲ್ಲಿ ಮತ್ತು ಭಾಗಮಂಡಲದಲ್ಲಿ ಕಾವೇರಿಯ ನದಿಯ ಸುಮಾರು ೩ ಕಿ.ಮೀ. ವರೆಗೆ ಹೂಳೆÉತ್ತುವ ರೂ. ೯೯ ಲಕ್ಷ ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರಕಿದೆ. ಭಾಗಮಂಡಲ ಸಂಗಮ ಕ್ಷೇತ್ರದ ಕನ್ನಿಕೆ ನದಿಯ ಪ್ರವಾಹ ನಿಯಂತ್ರಿಸಲು ತಡೆಗೋಡೆ ನಿರ್ಮಾಣ ಮಾಡಲು ಮತ್ತು ಅಲ್ಲಿನ ಹೂಳೆತ್ತಲು ೧.೦೨ ಕೋಟಿ ರೂ. ಕಾಮಗಾರಿ ನಡೆಯಲಿದೆ ಎಂದು ಬೋಪಯ್ಯ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕದ್ರವ್ಯಗಳ ಮಾರಾಟ ದಂಧೆಗೆ ಕಡಿವಾಣ ಹಾಕಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್‌ಪಿ ಅವರಿಗೆ ಈಗಾಗಲೇ ಅಗತ್ಯ ನಿರ್ದೇಶನ ನೀಡಿರುವುದಾಗಿ ಶಾಸಕರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮತಾಂತರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾನೂನಿನಂತೆ ಮತಾಂತರಕ್ಕೆ ಪ್ರಚೋದನೆ ನೀಡುವುದೆ ಜಾಮೀನು ರಹಿತ ಕೃತ್ಯವಾಗಿದೆ. ಕಾನೂನಿನ ಮೂಲಕ ಇಂತಹ ಘಟನೆಗಳನ್ನು ನಿಗ್ರಹಿಸಬೇಕಾಗಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೇ ಬೇಕೆನ್ನುವ ಆಗ್ರಹ ಬೇಡ. ಮಡಿಕೇರಿಯಲ್ಲಿ ಇರುವ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸಾ ಸೌಲಭ್ಯಗಳು ಇವೆ ಒಳ್ಳೆಯ ವೈದ್ಯರಿದ್ದಾರೆ. ಮೈಸೂರು ಜಯದೇವದಂತಹ ಆಸ್ಪತ್ರೆಯೇ ಇಲ್ಲ್ಲಿಗೆ ಬೇಕೆಂದರೆ ಕಷ್ಟಸಾಧ್ಯವೆಂದು ತಿಳಿಸಿದ ಶಾಸಕರು, ಅಗತ್ಯ ಚಿಕಿತ್ಸಾ ಸೌಲಭ್ಯ ಇಲ್ಲಿದ್ದರೂ ರೋಗಿಗಳನ್ನು ಹೊರ ಆಸ್ಪತ್ರೆಗೆ ಕಳುಹಿಸುವ ಕೆಲ ಘಟನೆಗಳು ತನ್ನ ಗಮನಕ್ಕೆ ಬಂದಿದೆ. ಆ ರೀತಿ ಆಗಬಾರದೆಂದು ಬೋಪಯ್ಯ ಹೇಳಿದರು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿರುವ ಕೆ.ಜಿ. ಬೋಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ಕೊಡಗು ಪತ್ರಿಕಾ ಭವನ ಟ್ರಸ್ಟ್ ಖಜಾಂಚಿ ಕೆ. ತಿಮ್ಮಪ್ಪ ಮಾತನಾಡಿ, ಶಾಸಕ ಕೆ.ಜಿ. ಬೋಪಯ್ಯ ಅವರು ಹೋರಾಟ ಮತ್ತು ಕೆಲಸಕ್ಕೆ ಹೆಚ್ಚಿನ ಒತ್ತು ಕೊಟ್ಟು ಪ್ರಚಾರದಿಂದ ದೂರ ಉಳಿದವರೆಂದು ಅಭಿಪ್ರಾಯಿಸಿ ದರು.ಕೊಡಗು ಪತ್ರಕರ್ತರ ಸಂಘದ ಸದಸ್ಯ ರಂಜಿತ್ ಕವಲಪಾರ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿ, ವಂದಿಸಿದರು.