ಚೆಯ್ಯಂಡಾಣೆ, ಫೆ. ೨: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಮಕ್ಕಳ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ನಡೆಯಿತು.
ನರಿಯಂದಡ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಕರಡ, ಕಡಂಗ, ಎಡಪಾಲ, ಕಿಕ್ಕರೆ, ಕೊಕೇರಿ, ಪೊನ್ನೋಲ ಶಾಲೆಯ ಒಟ್ಟು ೧೨೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಣಿತ ಸ್ಪರ್ಧೆಯಲ್ಲಿ ಭಾಗವಹಿಸಿದರು.
ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ವಹಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಮುಖ್ಯ ಶಿಕ್ಷಕಿ ಮೀನಾ ಹಾಗೂ ಗ್ರಾ.ಪಂ. ವ್ಯಾಪ್ತಿಯ ೭ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.