ಸೋಮವಾರಪೇಟೆ, ಫೆ. ೨: ಇಲ್ಲಿನ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಭಾಷ್ಚಂದ್ರ ಬೋಸ್ ಜಯಂತಿಯನ್ನು ಪರಾಕ್ರಮ ದಿನವನ್ನಾಗಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸುಭಾಷ್ಚಂದ್ರ ಬೋಸ್ ಅವರ ಬಗ್ಗೆ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಉಪಾಧ್ಯಕ್ಷ ಹೆಚ್.ಜಿ. ಕುಟ್ಟಪ್ಪ, ಕಾರ್ಯದರ್ಶಿ ಬಿ.ಎಂ. ಆನಂದ, ಖಜಾಂಚಿ ಸಿ.ಬಿ. ಈರಪ್ಪ, ಎಂ.ಎ. ವೀರಪ್ಪ, ಟಿ.ಕೆ. ಮಾಚಯ್ಯ, ಮುಖ್ಯೋಪಾಧ್ಯಾಯ ಸಿ.ಕೆ. ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.