ಸೋಮವಾರಪೇಟೆ, ಫೆ. ೨: ತಾಲೂಕಿನ ಯಲಕನೂರು-ಕಾಟಿಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಚಾಮುಂಡೇಶ್ವರಿ ದೇವಾಲಯ ಲೋಕಾರ್ಪಣೆ ಮತ್ತು ಪ್ರತಿಷ್ಠಾಪನಾ ಮಹೋತ್ಸವ ತಾ. ೩ ರಂದು (ಇಂದು) ಬೆಳಿಗ್ಗೆ ೭.೩೦ಕ್ಕೆ ನಡೆಯಲಿದೆ. ಅಪರಾಹ್ನ ೨.೩೦ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ವಿರಕ್ತಮಠದ ಶ್ರೀ ಮಲ್ಲೇಶ ಸ್ವಾಮೀಜಿ, ದಿಂಡಗಾಡು ಬಸವಜ್ಯೋತಿ ಮಠದ ಶ್ರೀ ಅಪ್ಪಾಜಿ ಸ್ವಾಮೀಜಿ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಚಾಮುಂಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಬಸವರಾಜು ಮತ್ತಿತರರು ಭಾಗವಹಿಸಲಿದ್ದಾರೆ.