ಸಿದ್ದಾಪುರ, ಫೆ. ೨: ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿAದ ನೊಂದಾಯಿತ ಕಾರ್ಮಿಕರ ೧೦ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ ಫೋನ್ ವಿತರಣೆಗೆ ಚಾಲನೆ ನೀಡಲಾಯಿತು.

ವೀರಾಜಪೇಟೆ ತಾಲೂಕು ಮೈದಾನದಲ್ಲಿ ದಂಡಾಧಿಕಾರಿ ಅರ್ಚನಾ ಭಟ್ ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ವಿತರಿಸಿದರು. ಸರಕಾರದಿಂದ ದೊರಕುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು.

ಈಗಾಗಲೇ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಸಾಕಷ್ಟು ಸೌಲಭ್ಯಗಳು ದೊರಕುತ್ತಿದ್ದು, ಮಕ್ಕಳ ಶೈಕ್ಷಣಿಕ, ಆರೋಗ್ಯ ಸೇರಿದಂತೆ, ಕೆಲಸದ ಸಲಕರಣೆಗಳನ್ನು ನೀಡಲಾಗಿದ್ದು, ನೈಜ ಕಾರ್ಮಿಕರು ಕೂಡಲೇ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಸಿ. ಮಾದಪ್ಪ, ಡಿಇಓ ನವೀನ್ ಸೇರಿದಂತೆ ಫಲಾನುಭವಿಗಳು ಹಾಜರಿದ್ದರು.