ಪೊನ್ನಂಪೇಟೆ, ಫೆ. ೨: ಗೋಣಿ ಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ ಆಚರಿಸ ಲಾಯಿತು. ಈ ಸಂದರ್ಭ ಪ್ರಾಂಶು ಪಾಲ ಡಾ. ಎಂ.ಬಿ. ಕಾವೇರಪ್ಪ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅಹಿಂಸೆ ಮತ್ತು ಉಪವಾಸ ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ‍್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಆದರ್ಶ ಗುಣಗಳನ್ನು ಸರ್ವರೂ ಮೈಗೂಡಿಸಿ ಕೊಳ್ಳಬೇಕು ಎಂದರು. ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಅಂಗವಾಗಿ ಎರಡು ನಿಮಿಷಗಳ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.