ಕುಶಾಲನಗರ, ಫೆ. ೨: ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಾ ರೀತಿಯ ಪೂರ್ವ ಸಿದ್ಧತೆ ನಡೆದಿದ್ದು, ಪಟ್ಟಣ ತಳಿರು ತೋರಣಗಳಿಂದ ಸಿಂಗಾರಗೊAಡು ಪಟ್ಟಣದಲ್ಲಿ ಹಬ್ಬದ ವಾತಾವರಣ ಮೂಡಿದಂತೆ ಗೋಚರಿಸಿದೆ.
ಸಮ್ಮೇಳನಾಧ್ಯಕ್ಷರ ಮೆರವಣಿಗೆಯ ಮಾರ್ಗದ ಉದ್ದಕ್ಕೂ ಸ್ವಾಗತದ ಫಲಕಗಳು, ಬಣ್ಣ ಬಣ್ಣದ ತೋರಣ ಕಟ್ಟಲಾಗಿದೆ. ಕುಶಾಲನಗರ ಗಣಪತಿ ದೇವಾಲಯ ಮುಂಭಾಗದ ಫೀಲ್ಡ್ ಮಾರ್ಷಲ್ ವೃತ್ತದಲ್ಲಿ ಸಿಂಗಾರ ಎಲ್ಲರ ಗಮನ ಸೆಳೆದಿದೆ. ಸಮ್ಮೇಳನ ನಡೆಯುವ ಸಭಾಂಗಣದಲ್ಲಿ ೨೦೦೦ ಕ್ಕೂ ಹೆಚ್ಚು ಆಸನಗಳನ್ನು ಇರಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆದಿವೆ ಎಂದು ವೇದಿಕೆ ನಿರ್ವಹಣ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮ್‌ಕುಮಾರ್ ತಿಳಿಸಿದ್ದಾರೆ.
ಕುಶಾಲನಗರ - ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರಾರಂಭಗೊAಡು, ಸಮ್ಮೇಳನ ವೇದಿಕೆ ತನಕ ಸಾಗಲಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಕನ್ನಡ ಅಭಿಮಾನಿಗಳಿಗೆ ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟದ ವ್ಯವಸ್ಥೆಯನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಯಾರಿ ಮಾಡಲಾಗಿದೆ.
ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸ್ತಿçà ಶಕ್ತಿ ಮತ್ತು ಮಹಿಳಾ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ಸುಮಾರು ೩೦೦೦ಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್ ಮೂರ್ತಿ ಮತ್ತು ಸಮ್ಮೇಳನದ ಉಪ ಸಮಿತಿಗಳ ನೇತೃತ್ವದಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ.