ಮಡಿಕೇರಿ, ಫೆ. ೨: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದ ಮೂಲಕ ಪರೀಕ್ಷೆಗೆ ಮಾಡಬಹುದಾದ ಉತ್ತಮ ತಯಾರಿ ಹಾಗೂ ವಿದ್ಯಾರ್ಥಿಗಳ ಮನಸ್ಸಿನಿಂದ ಪರೀಕ್ಷೆಗಳ ಭಯವನ್ನು ಹೋಗಲಾಡಿಸುವ ತಂತ್ರಗಳನ್ನು ಹಂಚಿಕೊAಡು ಉಪಯುಕ್ತ ಮಾಹಿತಿ ನೀಡಿದರು. ಸಂಸ್ಥೆಯಲ್ಲಿ ನಿರ್ದೇಶಕರು ಹಾಗೂ ಡೀನ್ ಡಾ. ಕೆ.ಬಿ. ಕಾರ್ಯಪ್ಪ, ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಕಿಸಾನ್ ಅಕಾಡೆಮಿಕ್ ರಿಜಿಸ್ಟಾçರ್ ಡಾ. ರವಿಕಿರಣ, ನರ್ಸಿಂಗ್ ಪ್ರಾಂಶುಪಾಲೆ ಮಂಜುಳ, ಬೋಧಕ ಸಿಬ್ಬಂದಿ ಸೇರಿದಂತೆ ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.