ಕೂಡಿಗೆ, ಫೆ. ೨: ಇಲ್ಲಿಗೆ ಸಮೀಪದ ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕದ ನೂತನ ಕಟ್ಟಡ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಗ್ರಾಮಗಳ ಅಭಿವೃದ್ಧಿ ಮತ್ತು ಸ್ವಚ್ಛತೆ ಕಾಪಾಡಲು ಕಸ ವಿಲೇವಾರಿ ಘಟಕಗಳು ಮುಖ್ಯವಾಗಿರುತ್ತವೆ. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ದೃಷ್ಟಿಯಿಂದ ಕಸ ವಿಲೇವಾರಿ ಘಟಕಗಳ ಆರಂಭ ಮಾಡಲಾಗಿದೆ ಎಂದರು. ಹೆಬ್ಬಾಲೆ ಗ್ರಾಮ ಪಂಚಾಯಿತಿ ವತಿಯಿಂದ ೮.೫೦ ಲಕ್ಷದಲ್ಲಿ ನಿರ್ಮಾಣ, ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ೯.೬೦ ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
ಮಾಡಲಾಗಿದೆ ಎಂದರು. ಹೆಬ್ಬಾಲೆ ಗ್ರಾಮ ಪಂಚಾಯಿತಿ ವತಿಯಿಂದ ೮.೫೦ ಲಕ್ಷದಲ್ಲಿ ನಿರ್ಮಾಣ, ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ೯.೬೦ ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.