ಸೋಮವಾರಪೇಟೆ, ಫೆ. ೨: ಕಾರ್ಮಿಕ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಗುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಟ್ಯಾಬ್ ವಿತರಣೆ ಮಾಡಿದರು.
ತಾಲೂಕಿನಲ್ಲಿ ೧೨೦ ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಫಲಾನುಭವಿಗಳೆಂದು ಗುರುತಿಸಲಾಗಿದ್ದು, ಇವರಲ್ಲಿ ಪ್ರಥಮ ಹಂತವಾಗಿ ೭೭ ಮಂದಿಗೆ ಟ್ಯಾಬ್ ವಿತರಿಸಲಾಯಿತು.
ಶಾಸಕರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ಯಾಬ್ ವಿತರಿಸಿ ಮಾತನಾಡಿದ ಶಾಸಕ ರಂಜನ್, ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಟ್ಯಾಬ್ ವಿತರಣೆ ಮಾಡಲಾಗಿದೆ. ವೈಜ್ಞಾನಿಕತೆಯೊಂದಿಗೆ ತಂತ್ರಜ್ಞಾನ ಏರುಗತಿಯಲ್ಲಿದ್ದು, ಎಲ್ಲಾ ವಿದ್ಯಾರ್ಥಿಗಳೂ ಸಹ ಮಾಹಿತಿ ತಂತ್ರಜ್ಞಾನದ ಸೌಲಭ್ಯ ಹೊಂದಿಕೊAಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಕಿವಿಮಾತು ನುಡಿದರು. ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕಿ ಕೆ.ಎನ್. ಲೀನಾ, ಸಿಬ್ಬಂದಿಗಳಾದ ದರ್ಶನ್, ಪವಿತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.