ಮಡಿಕೇರಿ, ಫೆ. ೪: ೨೦೨೨-೨೩ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೨೮ ರವರೆಗೆ ಕಾಲಾವಕಾಶ ನೀಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ, ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.

ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫ ನ್ನು ಹಾಗೂ

ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ

ಇ-ಮೇಲ್ : ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ

ದೂ. ೦೮೦-೩೫೨೫೪೭೫೭ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.