ಕೂಡಿಗೆ, ಫೆ. ೩: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿಯು ಅಮೃತ ಗ್ರಾಮ ಯೋಜನೆಗೆ ಜಿಲ್ಲೆಯಲ್ಲಿ ಆಯ್ಕೆಯಾಗಿದ್ದು, ಅದಕ್ಕೆ ಸಂಬAಧಿಸಿದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಗುಣವಾಗಿ ಸದಸ್ಯರುಗಳು ಚರ್ಚಿಸಿದರು. ನಂತರ ಅನುದಾನ ಬಳಕೆಯನ್ನು ಮಾಡಿ ಎಲ್ಲಾ ವಾರ್ಡ್ಗಳಲ್ಲಿ ಕಾಮಗಾರಿ ಯನ್ನು ನಡೆಸುವ ಬಗ್ಗೆ ಚರ್ಚೆಗಳು ನಡೆದು ಕ್ರಿಯಾ ಯೋಜನೆ ತಯಾರಿಸಿ ಅದರ ಮೂಲಕ ಕಾಮಗಾರಿಯನ್ನು ನಡೆಸಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಯೋಜನೆಗೆ ಸಂಬAಧಿಸಿದAತೆ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಸಂಬAಧಿಸಿದAತೆ ಚರ್ಚೆಗಳು ನಡೆದವು. ಆನೆ ಕೆರೆಯ ಸಂರಕ್ಷಣೆಗೆ ಸಂಬAಧಿಸಿದAತೆ ಚರ್ಚೆಗಳು ನಡೆದವು.
ನಂತರ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗೆ ಸಂಬAಧಿಸಿ ದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ವಿಷಯಗಳ ಬಗ್ಗೆ ಮಾಹಿತಿ ಪಡೆದ ಸದಸ್ಯರು ಆಯಾ ವಾರ್ಡ್ಗಳಲ್ಲಿ ಕಾಮಗಾರಿಯನ್ನು ನಡೆಸುವ ಬಗ್ಗೆ ಪ್ರಸ್ತಾಪಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೇರಿದಂತೆ ಅಭಿವೃದ್ಧಿ ಅಧಿಕಾರಿ ಸಂತೋಷ, ಸರ್ವ ಸದಸ್ಯರು ಹಾಜರಿದ್ದರು.