ನಾಪೋಕ್ಲು, ಫೆ. ೪: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ, ಮಡಿಕೇರಿಯ ರೋಟರಿ ಮಿಸ್ಟಿಹಿಲ್ಸ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ರಾಷ್ಟಿçÃಯ ವಿಜ್ಞಾನ ಮತ್ತು ಗಣಿತ ದಿನಾಚರಣೆ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ತಾಲೂಕಿನ ೨೩ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ೧೮೪ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಸ್ವಾಮಿ ವಿವೇಕಾ ನಂದ ಯೂತ್ ಮೂವ್‌ಮೆಂಟ್ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮತ್ತು ಗಣಿತ ರಸಪ್ರಶ್ನೆ ಸ್ಪರ್ಧೆ, ಮಾದರಿ ತಯಾರಿಕಾ ಸ್ಪರ್ಧೆ, ವಿಜ್ಞಾನ ಮತ್ತು ಗಣಿತ ವಿಷಯಗಳ ರಂಗೋಲಿ ಸ್ಪರ್ಧೆ ಹಾಗೂ ಮೈನಸ್ - ಮೈನಸ್ ಸ್ಪರ್ಧೆಗಳನ್ನು ಏರ್ಪಡಿಸಿತ್ತು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಗಣಿತ ಮತ್ತು ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಡಗದಾಳು ಶಾಲೆಯ ವಿಷ್ಣು ಟಿ.ಜಿ. ಮತ್ತು ಸಫೀದ್ ಎ.ಎಲ್. ತಂಡ ಪ್ರಥಮ ಸ್ಥಾನಗಳಿಸಿತು.

ಭಾಗಮಂಡಲದ ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗಳಾದ ಫೌಜಾನಾ ಮತ್ತು ಪೂರ್ವಿಕ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಚಂದನ ಮತ್ತು ಸ್ಪರ್ಶ ತಂಡ ಪ್ರಥಮ ಸ್ಥಾನವನ್ನು, ಗಾಳಿಬೀಡಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನೂತನ್ ಮತ್ತು ಹರಿದಾಸ್ ತಂಡ ದ್ವಿತೀಯ ಸ್ಥಾನ ಗಳಿಸಿತು. ರಂಗೋಲಿ ಸ್ಪರ್ಧೆಯಲ್ಲಿ ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ವಿಜಯಶ್ರೀ ಮತ್ತು ಅರ್ಚನಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿದರೆ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಪ್ರಾರ್ಥನಾ ಮತ್ತು ವರ್ಷಿಣಿ ತಂಡ ದ್ವಿತೀಯ ಸ್ಥಾನ ಗಳಿಸಿದರು. ಮೈನಸ್ ಇಂಟು ಮೈನಸ್ ಸ್ಪರ್ಧೆಯಲ್ಲಿ ವೇದಾ ಮತ್ತು ರಕ್ಷಿತಾ ತಂಡ ಪ್ರಥಮ ಸ್ಥಾನ ಗಳಿಸಿದರೆ ಶ್ರೇಯಸ್ ಮತ್ತು ಧನ್ಯಶ್ರೀ ತಂಡ ದ್ವಿತೀಯ ಸ್ಥಾನಗಳಿಸಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಎಂ ಕೃಷ್ಣಪ್ಪ ಮಾತನಾಡಿ ವಿದ್ಯಾರ್ಥಿಗಳು ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕುತೂಹಲವನ್ನು ಬೆಳೆಸಿಕೊಂಡು ಹೆಚ್ಚಿನ ಆಸಕ್ತಿಯಿಂದ ಅಧ್ಯಯನ ಮಾಡಬೇಕು ಎಂದರು. ರೋಟರಿ ಮಿಸ್ಟಿ ಹಿಲ್ಸ್ನ ಅಧ್ಯಕ್ಷ ಪ್ರಸಾದ್ ಗೌಡ ಮಾತನಾಡಿ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿಯಬೇಕು. ಅದು ಉನ್ನತ ಶಿಕ್ಷಣಕ್ಕೆ ಅಡಿಪಾಯ ಆಗಲಿದೆ ಎಂದರು. ಸ್ವಾಮಿ ವಿವೇಕಾನಂದ ಯೂಥ್ ಮೂವ್‌ಮೆಂಟ್ ಸಲಹಾ ಸಮಿತಿ ಸದಸ್ಯ ಅಜಯ್ ಸೂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಆಗಲು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್‌ನ ಶಿಕ್ಷಣ ವಿಭಾಗದ ಯೋಜನಾ ನಿರ್ದೇಶಕ ಅವಿತ್ ಆನಂದ್ ರಾಜು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶು ಪಾಲೆ ಪಿ.ಕೆ. ನಳಿನಿ, ಶಾಲಾ ಶಿಕ್ಷಣ ಸುಗಮದಾರ ಸಿ. ಮಂಜುನಾಥ್, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಜಿಮ್ಮಿ ಸಿಕ್ವೇರ, ಕೊಡಗು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ, ವಿದ್ಯಾರ್ಥಿ ಪ್ರತಿನಿಧಿ ಬಿ.ವಿ. ನಂದಿನಿ ಉಪಸ್ಥಿತರಿದ್ದರು.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ಏರ್ಪಡಿಸ ಲಾಗಿದ್ದ ಮಡಿಕೇರಿ ತಾಲೂಕು ಮಟ್ಟದ ರಾಷ್ಟಿçÃಯ ವಿಜ್ಞಾನ ಮತ್ತು ಗಣಿತ ದಿನಾಚರಣೆ ಕಾರ್ಯ ಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ ಉದ್ಘಾಟಿಸಿದರು. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಲಾಗಿದ್ದ ಮಡಿಕೇರಿ ತಾಲೂಕು ಮಟ್ಟದ ರಾಷ್ಟಿçÃಯ ವಿಜ್ಞಾನ ಮತ್ತು ಗಣಿತ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.