ಮಡಿಕೇರಿ, ಫೆ. ೩: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಲ್ಲಿ ಕೌಶಲ್ಯ ಕರ್ನಾಟಕ ತಂತ್ರಾAಶದ ಮುಖಾತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾ ಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ (ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ ಮತ್ತು ಮರಾಠ ನಿಗಮಗಳಡಿಯಲ್ಲಿ ಬರುವ ಸಮುದಾಯ ಹೊರತುಪಡಿಸಿ) ಹಿಂದುಳಿದ ವರ್ಗಗಳ ಯುವ ಜನರಿಗೆ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಹಾಗೂ ತಾಂತ್ರಿಕೇತರ ಜಾಬ್ ರೋಲ್ ಆದ ಟೈಲರಿಂಗ್ ತರಬೇತಿಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾವಾರು ಐಟಿಐಗಳ ಮೂಲಕ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅಧಿಕೃತ ಮಾನ್ಯತೆ ಪಡೆದ ಸರ್ಕಾರದ ಸಂಸ್ಥೆಯಾದ ಎಟಿಡಿಸಿ. (ಉಡುಪು ತರಬೇತಿ ಮತ್ತು ವಿನ್ಯಾಸ ಕೇಂದ್ರಗಳ ಮೂಲಕ ತರಬೇತಿ ನೀಡಲು ಮಾರ್ಚ್ ೩೧ ರವರೆಗೆ ಕೌಶಲ್‌ಕರ್ (ಏಚಿushಚಿಟಞಚಿಡಿ) ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

೧೦ ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮ, ಪದವಿ, ಇಂಜಿನಿಯರಿAಗ್ ವ್ಯಾಸಂಗ ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ಈ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವಾಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೨೫ ವರ್ಷಗಳ ಒಳಗಿರಬೇಕು. ಪ್ರವರ್ಗ-೧ ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-೨ಎ, ೩ಎ ಮತ್ತು ೩ಬಿ ಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ ಆದಾಯ ರೂ. ೮ ಲಕ್ಷಗಳಿಗಿಂತ ಕಡಿಮೆ ಇರಬೇಕು.

ಅರ್ಜಿದಾರರು hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ/ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೯೬೦೬೦೬೬೩೮೯ ಮತ್ತು ೮೮೨೪೩೦೦೪೦೦ ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ನ್ನು ಸಂಪರ್ಕಿಸ ಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.