ಮಡಿಕೇರಿ, ಫೆ. ೩: ಕುಶಾಲನಗರದಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಿರಿಯ ರಾಜಕಾರಿಣಿ, ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರ ಮನೆಗೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಅಲ್ಲದೆ ಕೆಲ ಗಂಟೆಗಳ ಕಾಲ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ನಾಣಯ್ಯ ಅವರೊಂದಿಗೆ ಚರ್ಚಿಸಿದರು. ನಂತರ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದರು.