ಸೋಮವಾರಪೇಟೆ, ಫೆ. ೪: ಹಿಂದೂಪರ ಕಾರ್ಯಕರ್ತರಿಗೆ ಜಿಲ್ಲಾಡಳಿತದ ಮೂಲಕ ಗಡಿಪಾರು ನೋಟೀಸ್ ನೀಡಿರುವ ಕ್ರಮವನ್ನು ಖಂಡಿಸಿ ಸೋಮವಾರಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಂತರ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಸಂಚಾಲಕ ಬೋಜೇಗೌಡ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಧಮನಿಸುವ ಹುನ್ನಾರದಿಂದ ನೋಟೀಸ್ ನೀಡಲಾಗಿದೆ. ಇಂತಹ ಕ್ರಮಕ್ಕೆ ಆಡಳಿತ ವ್ಯವಸ್ಥೆ ಮುಂದಾಗಿ ರುವುದು ಖಂಡನೀಯ ಎಂದರು.
ಹಿAದೂ ಸಂಘಟನೆಗಳು ಬಲಿಷ್ಠವಾಗಿರುವ ಕಡೆಗಳಲ್ಲಿ ಶಾಂತಿಯ ವಾತಾವರಣವಿದೆ. ಅನ್ಯಧರ್ಮೀಯರ ದುರಾಕ್ರಮಣಗಳನ್ನು ಮೆಟ್ಟಿನಿಂತು ಹಿಂದೂ ಸಮಾಜದ ರಕ್ಷಣೆಯಾಗು ತ್ತಿದೆ. ಇದನ್ನು ಸಹಿಸದ ದುಷ್ಟಶಕ್ತಿಗಳು ಹಿಂದೂ ಸಂಘಟನೆಯ ಮುಖಂಡ ರನ್ನು ಗಡಿಪಾರು ಮಾಡಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಡಿಪಾರಿನ ನೋಟೀಸನ್ನು ಜಿಲ್ಲಾಡಳಿತ ತಕ್ಷಣ ಹಿಂಪಡೆಯಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ಎಂ.ಬಿ. ಉಮೇಶ್, ಸುನಿಲ್ ಮಾದಾಪುರ, ತಾಲೂಕು ಪ್ರಮುಖರಾದ ವಿನು, ಗಿರೀಶ್, ಮಾದಪ್ಪ, ವಿಶ್ವ ಹಿಂದೂ ಪರಿಷತ್ನ ಹುಲ್ಲೂರಿಕೊಪ್ಪ ಚಂದ್ರು, ಕೆ.ಜಿ. ಸುರೇಶ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ರೂಪಾ ಸತೀಶ್, ದೀಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕುಶಾಲನಗರ: ಹಿಂದೂ ಸಾಮಾಜಿಕ ಕಾರ್ಯಕರ್ತರ ಮೇಲೆ ಕೊಡಗು ಜಿಲ್ಲಾಡಳಿತ ಗಡಿಪಾರು ಮಾಡಲು ಕಾರಣ ಕೇಳಿ ನೋಟೀಸ್ ಹೊರಡಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ತಾಲೂಕು ಸಂಚಾಲಕ ಹರೀಶ್ ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಹಿಂದೂಪರ ಸಂಘಟನೆಯ ಪ್ರಮುಖರು ಪ್ರತಿಭಟನೆ ನಡೆಸಿದರು.