ಕುಶಾಲನಗರ, ಫೆ. ೩: ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಸೇರಿದಂತೆ ವಿವಿಧೆಡೆ ಕಳ್ಳತನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ೩ ಮಂದಿ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಕುಶಾಲನಗರ ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ಕೈಗೊಂಡ
(ಮೊದಲ ಪುಟದಿಂದ) ಪೊಲೀಸ್ ಕಾರ್ಯಾಚರಣೆ ತಂಡ ನಾಪೊಕ್ಲು ಗ್ರಾಮದ ಎಂ.ಎ. ಇಬ್ರಾಹಿಂ (೨೭) ಮಡಿಕೇರಿ ಆಜಾದ್ ರಸ್ತೆಯ ಎಂ.ಎA. ವಾಸಿಂ (೨೯) ನಾಪೋಕ್ಲು ಕೊಳಕೇರಿ ಗ್ರಾಮದ ಟಿ.ಎಸ್. ಸುದೀಪ್ (೨೧) ಎಂಬವರುಗಳನ್ನು ಬಂಧಿಸಿದ್ದಾರೆ ಬಂಧಿತರಿAದ ೧೨ ಲಕ್ಷ ರೂ. ಮೌಲ್ಯದ ಚಿನ್ನಾಭರಣ, (ಕೆ.ಎ ೦೧ ಎಂ.ಎA ೭೭೨೪) ಬಲೇನೋ ಕಾರು, (ಕೆಎ ೪೦ ಎಂ-೪೧೮) ಮಾರುತಿ ೮೦೦ ಕಾರು ಮತ್ತು (ಕೆಎ ೦೮ ಪಿ ೫೩೭೮) ನೋಂದಣಿಯ ಆಲ್ಟೋ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ಕೆ. ರಾಮರಾಜನ್ ತಿಳಿಸಿದ್ದಾರೆ.
ಇನ್ನು ನಾಲ್ಕು ಜನ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್ ಸುಂದರ್‌ರಾಜ್ ನಿರ್ದೇಶನದಂತೆ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಪಟ್ಟಣ ಠಾಣ ನಿರೀಕ್ಷಕ ಜಿ.ಎನ್. ಶ್ರೀಕಾಂತ್ ನೇತೃತ್ವದಲ್ಲಿ ಪಿಎಸ್‌ಐಗಳಾದ ಚಂದ್ರಶೇಖರ್, ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್ ಮತ್ತು ಎಎಸ್‌ಐಗಳಾದ ವೆಂಕಟೇಶ್, ಗೋಪಾಲ್, ಗಣಪತಿ ಸಿಬ್ಬಂದಿಗಳಾದ ಸತೀಶ್, ಮಂಜುನಾಥ್, ದಯಾನಂದ್, ನಾಗರಾಜ್, ಸುದೀಶ್‌ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ದಿವೇಶ್, ರಂಜಿತ್, ಗಣೇಶ್, ಸಹನ, ಶರ್ಮಿಳಾ, ರಾಜೇಶ್, ಗಿರೀಶ್, ಪ್ರವೀಣ್, ಚಾಲಕರಾದ ಅರುಣ್, ರಾಜು, ಯೋಗೇಶ್, ಶೇಷಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.