ಮಡಿಕೇರಿ, ಫೆ. ೩: ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್ ಸಂಸ್ಥೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಎನ್‌ಆರ್‌ಎಲ್‌ಎಂ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಮಟ್ಟದ ವ್ಯಾಪಾರ ಮೇಳವು ತಾ. ೭ ಮತ್ತು ೮ ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ವ್ಯಾಪಾರ ಮೇಳದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಡಗು ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ಕೋರಿದ್ದಾರೆ.