ಮಡಿಕೇರಿ, ಫೆ. ೩: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಯನ್ನು ಮತ್ತಷ್ಟು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸುವಂತೆ ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪಂಚಾಯಿತಿ, ಗಾಳಿಬೀಡು ಗ್ರಾಮ ಪಂಚಾಯಿತಿ ಮತ್ತು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಗಾಳಿಬೀಡು ಗ್ರಾ.ಪಂ.ನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ನಡೆದ ‘ನರೇಗಾ ದಿನಾಚರಣೆ’ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ಮನರೇಗಾ ಯೋಜನೆಯಲ್ಲಿ ಕೊಡಗು ಜಿಲ್ಲೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಮನರೇಗಾ ಯೋಜನೆಯ ಪ್ರಗತಿಯಲ್ಲಿ ತಾಂತ್ರಿಕ ಸಿಬ್ಬಂದಿಗಳು ಮಹತ್ತರ ಪಾತ್ರ ವಹಿಸುತ್ತಾರೆ. ಇದುವರೆಗೂ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಗ್ರಾಮಮಟ್ಟದ ಜನರಿಗೆ ತಲುಪಿಸುವಲ್ಲಿ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಶಾಲೆ, ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ನರೇಗಾ ಯೋಜನೆಯು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿಯೂ ಯೋಜನೆಯನ್ನು ಮತ್ತಷ್ಟು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತೆ ಅವರು ಸಲಹೆ ನೀಡಿದರು.

ಜಿ.ಪಂ. ಉಪ ಕಾರ್ಯದರ್ಶಿ ಜಿ. ಧನರಾಜು ಮಾತನಾಡಿ, ೨೦೦೫ ರಲ್ಲಿ ಜಾರಿಯಾದ ಈ ಯೋಜನೆಯು ಇಂದಿನ ದಿನದವರೆಗೂ ಯಶಸ್ವಿಯಾಗಿ ಸಾಗಿದೆ. ಗ್ರಾಮೀಣ ಭಾಗದ ಜನರಿಗೆ ಈ ಯೋಜನೆಯು ಅಕ್ಷಯ ಪಾತ್ರೆಯಾಗಿದೆ ಎಂದರು.

ಇದೇ ವೇಳೆ ಗಾಳಿಬೀಡು ಗ್ರಾ.ಪಂ.ನಲ್ಲಿ ೧೦೦ ದಿನ ಯಶಸ್ವಿಯಾಗಿ ಮನರೇಗ ಯೋಜನೆಯಡಿ ಕೆಲಸ ನಿರ್ವಹಿಸಿದ ಹಮ್ಮಿಯಾಲ ಗ್ರಾಮದ ಕೆ.ಎ. ದೇವಯ್ಯ ಅವರನ್ನು ಗೌರವಿಸಲಾಯಿತು.

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ: ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ದಿನದ ಅಂಗವಾಗಿ ಆರೋಗ್ಯ ಶಿಬಿರ ಏರ್ಪಡಿಸಲಾಯಿತು. ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಚೀಟಿದಾರರಿಗೆ ಇ-ಶ್ರಮ್ ಕಾರ್ಡ್ಗಳನ್ನು ವಿತರಿಸಲಾಯಿತು. ತೋಳೂರುಶೆಟ್ಟಳ್ಳಿ, ಸುಂಟಿಕೊಪ್ಪ, ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಮಿಕರಿಗೆ ಉದ್ಯೋಗ ಚೀಟಿ ವಿತರಿಸಲಾಯಿತು. ವೀರಾಜಪೇಟೆ ತಾಲೂಕು ನಿಟ್ಟೂರು ಗ್ರಾಮ ಪಂಚಾಯಿತಿಯಲ್ಲಿ ೧೦೦ ದಿವಸ ಪೂರ್ಣಗೊಳಿಸಿದ ಕುಟುಂಬದ ಮುಖ್ಯಸ್ಥರಿಗೆ ಗುರುವಾರ ಸನ್ಮಾನಿಸಲಾಯಿತು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಕೆ.ಟಿ ಧರ್ಮಾವತಿ, ಸದಸ್ಯರಾದ ರಾಜಶೇಖರ್, ಯೋಜನಾ ನಿರ್ದೇಶಕರಾದ ಜಗದೀಶ್, ಮಡಿಕೇರಿ ತಾ.ಪಂ. ಇಒ ಶೇಖರ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಹೇಮಂತ್, ರವೀಶ್, ಪಿಡಿಓ ಶಶಿಕಿರಣ್, ಶಾಲಾ ಮುಖ್ಯೋಪಾಧ್ಯಾಯಿನಿ ದೇವಮ್ಮ, ಜಿಲ್ಲಾ ಸಂಘದ ಅಧ್ಯಕ್ಷ ಎಂ.ಬಿ. ಪ್ರತೀಕ್, ರಾಜ್ಯ ಸಂಘದ ಪ್ರತಿನಿಧಿ ಕೆ.ಸಿ. ರಂಜಿತ್ ಇತರರು ಇದ್ದರು.