ಸೋಮವಾರಪೇಟೆ, ಫೆ. ೫: ಈ ನೆಲದ ಸಂಸ್ಕೃತಿಯಾಗಿರುವ ಜಾನಪದದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕೆಂದು ನಿವೃತ್ತ ಮುಖ್ಯೋಪಾಧ್ಯಾಯ ಗುಂಡೇಗೌಡ ಅವರು ಅಭಿಪ್ರಾಯಿಸಿದರು.
ಕರ್ನಾಟಕ ಜಾನಪದ ಪರಿಷತ್ನ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಸಂಸ್ಕೃತಿಯ ತಾಯಿ ಬೇರಿನಂತಿರುವ ಜಾನಪದವನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರ ಪಾತ್ರ ಮುಖ್ಯ. ಇಂದು ಬಹುತೇಕ ಜಾನಪದ ಸಂಸ್ಕೃತಿ, ಕಲೆ, ಆಚಾರ, ವಿಚಾರ, ಹಾಡು, ಗಾದೆ, ಕವಿತೆಗಳು ಮರೆಯಾಗುತ್ತಿವೆ. ಜಾನಪದ ಸಂಸ್ಕೃತಿಯ ಬಗ್ಗೆ ಯುವಜನಾಂಗಕ್ಕೆ ಆಸಕ್ತಿ ಮೂಡಿಸುವಂತಾಗಬೇಕು. ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಬಗ್ಗೆ ಕಾರ್ಯಾಗಾರಗಳು ನಡೆಯಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಮಾರಲಿಂಗೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾಕುಮಾರಿ ಅವರು, ಗ್ರಾಮೀಣ ಭಾಗದಲ್ಲಿ ಇಂದಿಗೂ ಜೀವಂತವಿರುವ ಕಲೆಗಳನ್ನು ಗುರುತಿಸು ವಂತಾಗ ಬೇಕು. ಜೀವನದ ಭಾಗ ವಾಗಿರುವ ಜಾನಪದದ ನಿರ್ಲಕ್ಷö್ಯ ಸಲ್ಲದು ಎಂದರು.
ಅಧ್ಯಕ್ಷತೆಯನ್ನು ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ಪ್ರಕಾಶ್ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕಾರ್ಯಪ್ಪ, ಬೆಟ್ಟದಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ, ಶಿಕ್ಷಕ ಕಾಜೂರು ಸತೀಶ್, ಕುಮಾರ ಲಿಂಗೇಶ್ವರ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಲೀಲಾವತಿ ಅವರುಗಳು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಗುಂಡೇಗೌಡ ಅವರನ್ನು ಸನ್ಮಾನಿಸಲಾ ಯಿತು. ನಂತರ ಕುಮಾರಲಿಂಗೇಶ್ವರ ಪ್ರೌಢಶಾಲೆ, ಬೆಟ್ಟದಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ಶ್ರೀ ಕುಮಾರಲಿಂಗೇಶ್ವರ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಜಾನಪದ ಗೀತೆಗಾಯನ, ಜಾನಪದ ನೃತ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ವಿದ್ಯಾರ್ಥಿಗಳ ತಂಡಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಜಾನಪದ ಪರಿಷತ್ನ ಕಾರ್ಯದರ್ಶಿ ರುಬೀನಾ ಎಂ.ಎ., ಉಪಾಧ್ಯಕ್ಷ ದಾಮೋದರ್, ಖಜಾಂಚಿ ಶರ್ಮಿಳಾ ರಮೇಶ್, ಪದಾಧಿಕಾರಿಗಳಾದ ಅರುಣ, ಸುಶೀಲ ಹಾನಗಲ್, ಲಕ್ಷಿö್ಮಕಾಂತ್, ವಿಜಯ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.