ಮಡಿಕೇರಿ, ಫೆ. ೫: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆಆರ್ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ೪೫ ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತರು ತಾ. ೮ ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪ ಈ ದೂರವಾಣಿ ಸಂಖ್ಯೆ ಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆಎಲ್ಎನ್. ಮೂರ್ತಿ ತಿಳಿಸಿದ್ದಾರೆ.